
ನವದೆಹಲಿ, ಜುಲೈ 23(ಹಿ.ಸ.):
ಆ್ಯಂಕರ್:ದೇಶದ ಯುವಕರ ಭವಿಷ್ಯದೊಂದಿಗೆ ಆಟವಾಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಆರೋಪಿಗಳಿಗೆ ಶೀಘ್ರದಲ್ಲಿ ಕಠಿಣ ಶಿಕ್ಷೆ ವಿಧಿಸಲು ಎಲ್ಲಾ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳನ್ನು ರಚಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮವಾಗಿದೆ ಎಂದು ಹೇಳಿದ್ದಾರೆ. ತ್ವರಿತ ನ್ಯಾಯಾಲಯಗಳ ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೇಪರ್ ಸೋರಿಕೆ ಪ್ರಕರಣಗಳನ್ನು ಖಂಡಿಸಿ ದೆಹಲಿಯ ಜಂತರ್-ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾನಿರತ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.