
ಬೆಂಗಳೂರು, 23 ಜುಲೈ (ಹಿ.ಸ.):
ಆ್ಯಂಕರ್:
ದೇಶದಲ್ಲಿ ನೀಟ್ ಪರೀಕ್ಷೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ವಿಚಾರದಲ್ಲಿಯೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿರುವ ನೀಟ್ ವಿಷಯದಲ್ಲಿ ಧ್ವನಿ ಎತ್ತುತ್ತಿರುವವರ ವಿರುದ್ಧ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆ ಮತ್ತು ವಾಗ್ದಾಳಿ ಖಂಡನೀಯ ಎಂದು ಹೇಳಿದರು.
ಪ್ರತಿ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಚಲವಾದಿ ನಾರಾಯಣಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರಾಜ್ಯದ ವಿರೋಧ ಪಕ್ಷದ ನಾಯಕತ್ವದ ಕಾರ್ಯವೈಖರಿಯನ್ನು ಟೀಕಿಸಿದರು.
ಬಿಜೆಪಿ ಕಾರ್ಯಕರ್ತರು ರಾಜಕೀಯ ಪ್ರತಿಭಟನೆಗಳ ವೇಳೆ ಮೊಟ್ಟೆ, ಚಪ್ಪಲಿ ಹಾಗೂ ಪೊರಕೆ ಎಸೆಯುವ ಸಂಸ್ಕೃತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರದೀಪ್ ಈಶ್ವರ್, ನೀಟ್ ವಿಚಾರವಾಗಿ ಆರ್. ಅಶೋಕ್ ಹಾಗೂ ಚಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಬಹಿರಂಗ ಚರ್ಚೆಗೆ ತಾವು ಸಿದ್ಧ ಎಂದು ಸವಾಲು ಹಾಕಿದರು.
ಕೇಂದ್ರ ಸರ್ಕಾರದ ನೀತಿಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನೂ ಟೀಕಿಸಿದ ಅವರು, ವಿದ್ಯಾರ್ಥಿಗಳ ಹಿತಾಸಕ್ತಿಗೆ ಆದ್ಯತೆ ನೀಡಿ ನೀಟ್ ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII