
ಬೆಂಗಳೂರು, 23 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅರಾಜಕತೆ ನಿರ್ಮಾಣವಾಗುತ್ತಿದೆ ಎಂದು ಹಿರಿಯ ಬಿಜೆಪಿ ಶಾಸಕ ಹಾಗೂ ಮಾಜಿ ಕಾನೂನು ಸಚಿವ ಎಸ್. ಸುರೇಶ್ ಕುಮಾರ್ ತೀವ್ರವಾಗಿ ಕಿಡಿಕಾರಿದ್ದಾರೆ.
ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ನಡೆದ ಹೋರಾಟದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಕಚೇರಿಗಳ ಮುಂದೆ ಪ್ರತಿಭಟನಾ ನಿರತ ಶಾಸಕರ ಮೇಲೆ ಮೊಟ್ಟೆ ದಾಳಿ ನಡೆಸುವ ಮೂಲಕ ಗೂಂಡಾವರ್ತನೆ ಪ್ರದರ್ಶಿಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದ್ದರೂ, ಸರ್ಕಾರದ ಕುಮ್ಮಕ್ಕಿನಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದರು.
ನೀಟ್ ಪರೀಕ್ಷೆ ವಿಚಾರವಾಗಿ ಮಾತನಾಡಿದ ಸುರೇಶ್ ಕುಮಾರ್, ಕೇಂದ್ರ ಶಿಕ್ಷಣ ಸಚಿವರು ಮತ್ತು ಎನ್ಟಿಎ ಸಂಸ್ಥೆ ತಕ್ಷಣವೇ ಎಚ್ಚೆತ್ತುಕೊಂಡು ಮರುಪರೀಕ್ಷೆ ನಡೆಸಿ ಪಾರದರ್ಶಕವಾಗಿ ಫಲಿತಾಂಶ ನೀಡಿದೆ. ಆದರೆ ವಿಪಕ್ಷಗಳು ವಿದ್ಯಾರ್ಥಿಗಳ ಹೆಸರಿನಲ್ಲಿ ರಾಜಕೀಯ ಲಾಭ ಪಡೆದು, ದೇಶದಲ್ಲಿ ಅನಗತ್ಯ ಅಶಾಂತಿ ಮತ್ತು ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII