
ಬಾಗಲಕೋಟೆ, 23 ಜುಲೈ (ಹಿ.ಸ.)
ಆ್ಯಂಕರ್ : ಬಾಗಲಕೋಟೆಯ ನವನಗರ ಬಸ್ ನಿಲ್ದಾಣದಲ್ಲಿರುವ ಅಂಗಡಿ ಹಾಗೂ ಮುಂಗಟ್ಟುಗಳಿಗೆ ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಗೆ ಲಭ್ಯವಾಗುತ್ತಿರುವ ಮೂಲಸೌಕರ್ಯ, ಸ್ವಚ್ಛತೆ, ಅಂಗಡಿಗಳ ನಿರ್ವಹಣೆ, ಪ್ರಯಾಣಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು ಹಾಗೂ ಬಸ್ ನಿಲ್ದಾಣದ ಒಟ್ಟಾರೆ ವ್ಯವಸ್ಥೆಯನ್ನು ಸ್ಥಳದಲ್ಲೇ ಅವಲೋಕಿಸಿದರು.
ಪರಿಶೀಲನೆ ವೇಳೆ ಅಂಗಡಿ ಮಾಲೀಕರು, ವ್ಯಾಪಾರಿಗಳು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿದ ಉಪ ಲೋಕಾಯುಕ್ತರು, ಸಾರ್ವಜನಿಕ ಸೇವೆಯಲ್ಲಿ ಯಾವುದೇ ನಿರ್ಲಕ್ಷ್ಯ ಕಂಡುಬರದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು. ಪ್ರಯಾಣಿಕರಿಗೆ ಸ್ವಚ್ಛ, ಸುರಕ್ಷಿತ ಹಾಗೂ ಅನುಕೂಲಕರ ವಾತಾವರಣ ಕಲ್ಪಿಸುವುದು ಆಡಳಿತದ ಪ್ರಮುಖ ಜವಾಬ್ದಾರಿಯಾಗಿದ್ದು, ಮೂಲಭೂತ ಸೌಲಭ್ಯಗಳ ನಿರ್ವಹಣೆಗೆ ಆದ್ಯತೆ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ಬಸ್ ನಿಲ್ದಾಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ಸ್ವಚ್ಛತಾ ಕ್ರಮಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಉಪ ಲೋಕಾಯುಕ್ತರಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ (ಬಾಲೆ) ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಪರಿಶೀಲನೆಯ ವೇಳೆ ನೀಡಲಾದ ಸೂಚನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದರು.
ಪರಿಶೀಲನೆಯ ಭಾಗವಾಗಿ ಬಸ್ ನಿಲ್ದಾಣದ ಆವರಣ, ಅಂಗಡಿ-ಮುಂಗಟ್ಟುಗಳು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ನಿರ್ವಹಣೆ, ಸ್ವಚ್ಛತಾ ಕ್ರಮಗಳು ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಇತರ ಸೌಲಭ್ಯಗಳನ್ನು ಅಧಿಕಾರಿಗಳು ಉಪ ಲೋಕಾಯುಕ್ತರ ಗಮನಕ್ಕೆ ತಂದರು. ಅಗತ್ಯ ಇರುವ ಕಡೆಗಳಲ್ಲಿ ತಕ್ಷಣವೇ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande