ಕಾಂಗ್ರೆಸ್ ಪಕ್ಷ ಕಾಕ್ರೋಚ್ ಕಾಂಗ್ರೆಸ್ ಆಗಿ ಬದಲಾಗಿದೆ: ಶಾಸಕ ಜಿ. ಜನಾರ್ದನ ರೆಡ್ಡಿ
ಬೆಂಗಳೂರು, 23 ಜುಲೈ (ಹಿ.ಸ.): ಆ್ಯಂಕರ್: ಬಿಜೆಪಿ ಮುಖಂಡರ ಮೇಲೆ ನಡೆದ ಮೊಟ್ಟೆ ಹಲ್ಲೆ ಮತ್ತು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಶಾಸಕ ಜಿ. ಜನಾರ್ದನ ರೆಡ್ಡಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಇನ್ಮುಂದೆ ಕಾಂಗ್ರೆ
ಸಂದರ್ಭಿಕ ಚಿತ್ರ


ಬೆಂಗಳೂರು, 23 ಜುಲೈ (ಹಿ.ಸ.):

ಆ್ಯಂಕರ್:

ಬಿಜೆಪಿ ಮುಖಂಡರ ಮೇಲೆ ನಡೆದ ಮೊಟ್ಟೆ ಹಲ್ಲೆ ಮತ್ತು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಶಾಸಕ ಜಿ. ಜನಾರ್ದನ ರೆಡ್ಡಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಇನ್ಮುಂದೆ ಕಾಂಗ್ರೆಸ್ ಪಕ್ಷವನ್ನು 'ನ್ಯಾಷನಲ್ ಕಾಂಗ್ರೆಸ್' ಎಂದು ಕರೆಯುವ ಬದಲು 'ಕಾಕ್ರೋಚ್ ಕಾಂಗ್ರೆಸ್' ಎಂದು ಕರೆಯಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಕಚೇರಿ ಬಳಿ ನಿನ್ನೆ ನಡೆದ ಬಿಜೆಪಿ ಶಾಸಕರ ಮೇಲಿನ ದಾಳಿ ಪೂರ್ವಯೋಜಿತ ಕೃತ್ಯವಾಗಿದ್ದು, ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಅವರು ಆರೋಪಿಸಿದರು.

ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಇತರೆ ಶಾಸಕರನ್ನು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಕಚೇರಿ ಮುಂದೆ ಕರೆದೊಯ್ದು ಪೊಲೀಸ್ ಇಲಾಖೆಯು ಸರ್ಕಾರದ ಪರವಾಗಿ ವರ್ತಿಸಿದೆ. ದಾಳಿಯ ಸಂದರ್ಭದಲ್ಲಿ ಪೊಲೀಸರು ಮೂಕನಾಯಕರಾಗಿದ್ದು, ಶಾಸಕ ಅಶ್ವತ್ಥನಾರಾಯಣ್ ಹಾಗೂ ರಾಮಮೂರ್ತಿ ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಲಾಗಿದೆ. ಈಗಾಗಲೇ

ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಸರ್ಕಾರದ ಧೋರಣೆ ಹಾಗೂ ಕಾನೂನು ಚೌಕಟ್ಟಿನನ್ವಯ ಮುಂದಿನ ಹೋರಾಟವನ್ನು ಮುಂದುವರೆಯಲಾಗುವುದು ಎಂದು ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದರು.

ನೀಟ್ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಮಾತನಾಡಿದ ರೆಡ್ಡಿ, ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವವರು ನಿಜವಾದ ವಿದ್ಯಾರ್ಥಿಗಳಲ್ಲ, ಬದಲಾಗಿ ಅವರು ಸ್ಟ್ರೀಟ್ ಫೈಟರ್ಸ್ ಹಾಗೂ ಗೂಂಡಾಗಳು ಎಂದು ಟೀಕಿಸಿದರು. ಪರೀಕ್ಷೆಯಲ್ಲಿ ಉತ್ತೀರ್ಣರಾದ ನಿಜವಾದ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ, ಕೆಲವರು ರಾಜಕೀಯ ಲಾಭಕ್ಕಾಗಿ ಮತ್ತು ಸರ್ಕಾರಕ್ಕೆ ಮಸಿ ಬಳೆಯಲು ಈ ರೀತಿಯ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande