

ಬೆಂಗಳೂರು, 23 ಜುಲೈ (ಹಿ.ಸ.):
ಆ್ಯಂಕರ್:
ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ದಿವಂಗತ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಚೆನ್ನಮ್ಮ ಅವರ ಅಗಲಿಕೆಯಿಂದ ದುಃಖದಲ್ಲಿರುವ ಕುಟುಂಬ ವರ್ಗದವರನ್ನು ಭೇಟಿಯಾದ ಲಕ್ಷ್ಮಣ ಸವದಿ ಅವರು, ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಮೃತರ ಆತ್ಮಕ್ಕೆ ಶಾಂತಿ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII