
ಕೊಪ್ಪಳ, 24 ಜುಲೈ (ಹಿ.ಸ.):
ಆ್ಯಂಕರ್ : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಗಣಿತ ಮತ್ತು ವಿಜ್ಞಾನ ವಿಷಯಗಳ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗಣಿತ ಶಿಕ್ಷಕ ಹುದ್ದೆಗೆ ಬಿ.ಎಸ್ಸಿ (ಪಿಸಿಎಂ), ಬಿ.ಎಡ್ ಮತ್ತು ವಿಜ್ಞಾನ ಶಿಕ್ಷಕ ಹುದ್ದೆಗೆ ಬಿ.ಎಸ್ಸಿ (ಸಿಬಿಝಡ್), ಬಿ.ಎಡ್ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಟಿಇಟಿ ಉತ್ತೀರ್ಣರಾಗಿರಬೇಕು.
ಆಸಕ್ತರು ತಮ್ಮ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 31ರ ಸಂಜೆ 4:30 ಗಂಟೆಯೊಳಗೆ `ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಚಿಕ್ಕಮ್ಯಾಗೇರಿ (ಟಿಪ್ಪು ಸರ್ಕಲ್, ಶಾದಿಮಹಲ್ ಹತ್ತಿರ, ಯಲಬುರ್ಗಾ)' ವಿಳಾಸಕ್ಕೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9739610372 ಗೆ ಸಂಪರ್ಕಿಸಬಹುದು ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್