ಬಾಗಲಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ಬಾಗಲಕೋಟೆ, 24 ಜುಲೈ (ಹಿ.ಸ.): ಆ್ಯಂಕರ್ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಕಾಂಗ್ರೆಸ್ ಹಾಗೂ ದೇಶವಿರೋಧಿ ಶಕ್ತಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ನವನಗರದಲ್ಲಿರುವ ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಜಿಲ್ಲಾಡಳಿತ ಭವನದವರೆಗೆ ನೂರಾರು ಕಾರ್ಯ
ಹೊರಟ


ಬಾಗಲಕೋಟೆ, 24 ಜುಲೈ (ಹಿ.ಸ.):

ಆ್ಯಂಕರ್ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಕಾಂಗ್ರೆಸ್ ಹಾಗೂ ದೇಶವಿರೋಧಿ ಶಕ್ತಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನವನಗರದಲ್ಲಿರುವ ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಜಿಲ್ಲಾಡಳಿತ ಭವನದವರೆಗೆ ನೂರಾರು ಕಾರ್ಯಕರ್ತರು ಪಾದಯಾತ್ರೆ ನಡೆಸಿ, ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ದೇಶದ ಹಿತಾಸಕ್ತಿಗೆ ವಿರುದ್ಧವಾಗಿರುವ ಬೆಳವಣಿಗೆಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಏಕತೆ, ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೇ ಶಕ್ತಿಗಳನ್ನು ಸಹಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ದೇಶದ ಹಿತಾಸಕ್ತಿಯನ್ನು ಕಡೆಗಣಿಸಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಷ್ಟ್ರದ ಭದ್ರತೆ, ಜನರ ಸುರಕ್ಷತೆ ಹಾಗೂ ರಾಷ್ಟ್ರೀಯ ಸ್ವಾಭಿಮಾನಕ್ಕೆ ಧಕ್ಕೆ ಉಂಟುಮಾಡುವ ಯಾವುದೇ ಬೆಳವಣಿಗೆಗಳನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಆರಂಭವಾದ ಪಾದಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಬಳಿಕ ಜಿಲ್ಲಾಡಳಿತ ಭವನಕ್ಕೆ ತಲುಪಿತು. ಪ್ರತಿಭಟನಾಕಾರರು ರಾಷ್ಟ್ರಭಕ್ತಿ ಪರ ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕಲ್ಪಿಸಿತ್ತು.

ಪ್ರತಿಭಟನೆಯ ಅಂತ್ಯದಲ್ಲಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ದೇಶವಿರೋಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಮಂಡಲಗಳ ಬಿಜೆಪಿ ಪದಾಧಿಕಾರಿಗಳು, ಮಹಿಳಾ ಮೋರ್ಚಾ, ಯುವ ಮೋರ್ಚಾ, ವಿವಿಧ ಘಟಕಗಳ ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande