ವಿಜಯಪುರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ವಿಜಯಪುರ, 24 ಜುಲೈ (ಹಿ.ಸ.) ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ, ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗುತ್ತಿರುವ ಸುಳ್ಳು ಪ್ರಕರಣಗಳು ಹಾಗೂ ದೇಶ ವಿರೋಧಿ ನಿಲುವುಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲ
ಹೊರಟ


ವಿಜಯಪುರ, 24 ಜುಲೈ (ಹಿ.ಸ.)

ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ, ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗುತ್ತಿರುವ ಸುಳ್ಳು ಪ್ರಕರಣಗಳು ಹಾಗೂ ದೇಶ ವಿರೋಧಿ ನಿಲುವುಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು, ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ, ಕಾಂಗ್ರೆಸ್ ಸರ್ಕಾರ ರಾಜಕೀಯ ದ್ವೇಷದ ಮನೋಭಾವದಿಂದ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ಉಂಟಾಗುತ್ತಿದ್ದು, ಜನವಿರೋಧಿ ಆಡಳಿತದಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಿಜೆಪಿ ಮುಖಂಡರು, ರಾಜಕೀಯ ಪ್ರೇರಿತ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಿಸಲಾಗುತ್ತಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು. ರಾಜ್ಯದಲ್ಲಿ ಕಾನೂನಿನ ಆಡಳಿತವನ್ನು ಸ್ಥಾಪಿಸಿ ಎಲ್ಲರಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕರು, ಪಕ್ಷದ ಜಿಲ್ಲಾ ಹಾಗೂ ಮಂಡಲ ಮಟ್ಟದ ಮುಖಂಡರು, ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಮತ್ತು ಯುವ ಮೋರ್ಚಾ ಕಾರ್ಯಕರ್ತರು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande