
ಬಳ್ಳಾರಿ, 24 ಜುಲೈ (ಹಿ.ಸ.)
ಆ್ಯಂಕರ್ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಮತ್ತು ದೇಶಾದ್ಯಂತ ಯುವಶಕ್ತಿ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಡಿ.ಜಿ. ಸಾಗರ್ ಬಣದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು.
ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಎ. ಮಾನಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವಲ್ಲಿ ತೋರುತ್ತಿರುವ ಹಠಮಾರಿತನ ಮತ್ತು ಪೊಲೀಸರ ವಿದ್ಯಾರ್ಥಿ ವಿರೋಧಿ ಅತಿರೇಕದ ವರ್ತನೆಗಳು ಖಂಡನೀಯ. ಅಲ್ಲದೇ, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್, ಟಿಯರ್ ಗ್ಯಾಸ್ ಬಳಕೆ ಮಾಡಿರುವುದು ಅಮಾನವೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್