ಬಳ್ಳಾರಿ : ಜು.25 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 24 ಜುಲೈ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ 11 ಕೆ.ವಿ. ಫೀಡರನಲ್ಲಿ ವಿದ್ಯುತ್ ಕಡಿತಗೊಳಿಸುವ ಅವಶ್ಯಕತೆ ಇದ್ದು, ಈ ಕೆಳಕಂಡ ಪ್ರದೇಶಗಳಲ್ಲಿ ಜು.25 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರ
ಬಳ್ಳಾರಿ : ಜು.25 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 24 ಜುಲೈ (ಹಿ.ಸ.)

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ 11 ಕೆ.ವಿ. ಫೀಡರನಲ್ಲಿ ವಿದ್ಯುತ್ ಕಡಿತಗೊಳಿಸುವ ಅವಶ್ಯಕತೆ ಇದ್ದು, ಈ ಕೆಳಕಂಡ ಪ್ರದೇಶಗಳಲ್ಲಿ ಜು.25 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು :-

ಎಫ್-7 ರ ವ್ಯಾಪ್ತಿಯ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟೆಯ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡ್ಡೆ, ಅಗಡಿ ಮಾರೆಪ್ಪ ಕೌಪೌಂಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಶ್, ಬಾಲಾಜಿರಾವ್ ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಆಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ ಹಾಗೂ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದೆ.

ಹಾಗಾಗಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande