ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ಪ್ರಿಯಾಂಕ್ ಖರ್ಗೆ
ಬೆಂಗಳೂರು, 24 ಜುಲೈ (ಹಿ.ಸ.): ಆ್ಯಂಕರ್: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಂಕಗಳ ಗೊಂದಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಣ್ಣ ತಿಗಣೆ ಕಚ್ಚಿದರೆ
ಸಂದರ್ಭಿಕ ಚಿತ್ರ


ಬೆಂಗಳೂರು, 24 ಜುಲೈ (ಹಿ.ಸ.):

ಆ್ಯಂಕರ್:

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಂಕಗಳ ಗೊಂದಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಣ್ಣ ತಿಗಣೆ ಕಚ್ಚಿದರೆ ಇಡೀ ರಾತ್ರಿ ನಿದ್ದೆ ಮಾಡಲಾಗುವುದಿಲ್ಲ. ಆದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕಣ್ಣೆದುರೇ ಕರಗುತ್ತಿದ್ದರೂ ಕೇಂದ್ರ ಸರ್ಕಾರಕ್ಕೆ ನಿದ್ದೆಯಿಂದ ಹೊರ ಬಾರದಿರುವುದು ದುರ್ದೈವ ಎಂದು ಕಿಡಿಕಾರಿದರು.

ನೀಟ್ ಪರೀಕ್ಷೆಯ ಅಂಕಗಳ ಗೊಂದಲದಿಂದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಅರ್ಹ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಈ ಗಂಭೀರ ವೈಫಲ್ಯಕ್ಕೆ ನೇರ ಹೊಣೆಗಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande