
ನವದೆಹಲಿ, ಜುಲೈ 24(ಹಿ.ಸ.):
ಆ್ಯಂಕರ್:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 7.30ರಿಂದ ಮುಂದಿನ ಆದೇಶದವರೆಗೆ 17 ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ ತಿಳಿಸಿದೆ.
ಈ ಅವಧಿಯಲ್ಲಿ ಪ್ರಯಾಣಿಕರ ಪ್ರವೇಶ ಹಾಗೂ ನಿರ್ಗಮನ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ರಾಜೀವ್ ಚೌಕ್, ಮಂಡಿ ಹೌಸ್ ಹಾಗೂ ಸೆಂಟ್ರಲ್ ಸೆಕ್ರೆಟೇರಿಯಟ್ ನಿಲ್ದಾಣಗಳಲ್ಲಿ ಕೇವಲ ಮಾರ್ಗ ಬದಲಿಸುವ ಸೌಲಭ್ಯ ಮಾತ್ರ ಲಭ್ಯವಿರುತ್ತದೆ.
ಲೋಕ ಕಲ್ಯಾಣ ಮಾರ್ಗ, ರಾಜೀವ್ ಚೌಕ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ, ಬರಾಖಂಭಾ ರಸ್ತೆ, ಸುಪ್ರೀಂ ಕೋರ್ಟ್, ಸೇವಾ ತೀರ್ಥ, ಜನಪಥ, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟೇರಿಯಟ್, ಐಟಿಒ, ದೆಹಲಿ ಗೇಟ್, ಇಂದ್ರಪ್ರಸ್ಥ, ಖಾನ್ ಮಾರ್ಕೆಟ್, ಜೋರ್ ಬಾಗ್, ಶಿವಾಜಿ ಸ್ಟೇಡಿಯಂ ಹಾಗೂ ಝಂಡೇವಾಲಾನ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಜಂತರ್-ಮಂತರ್‌ನಲ್ಲಿ ಸಿಜೆಪಿ ಸಂಘಟನೆಯ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ ದೆಹಲಿ ಮೆಟ್ರೋ ನಿಗಮದ ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.