
ಕೋಲಾರ ೨೪ ಜುಲೈ (ಹಿ.ಸ):
ಆ್ಯಂಕರ್ : ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ವಾಸವಿ ಯುವಜನ ಸಂಘ ವತಿಯಿಂದ ೨೦೨೬ರ ಏಪ್ರಿಲ್ ೧೮ ರಿಂದ ೨೭ರವರೆಗೆ ವಾಸವಿ ಜಯಂತಿ ಅಂಗವಾಗಿ ನಡೆದ ವಿವಿಧ ಕಾರ್ಯಕ್ರಮಗಳ ಸಮಾರೋಪ ಸಮಾರಂಭವನ್ನು ಇದೇ ಜುಲೈ ೨೬ರಂದು ಭಾನುವಾರ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಸಂಜೆ ೫ ಗಂಟೆಗೆ ಏರ್ಪಡಿಸಲಾಗಿದೆ ಎಂದು ಆರ್ಯವೈಶ್ಯ ಮಂಡಳಿ ಜಿಲ್ಲಾಧ್ಯಕ್ಸ ಎನ್. ಸಿ. ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರ್ಯವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷ ಆರ್.ಪಿ. ರವಿಶಂಕರ್ ಉದ್ಘಾಟನೆ ಮಾಡಲಿದ್ದು, ಅಧ್ಯಕ್ಷತೆಯನ್ನು ಎನ್.ಸಿ. ಸತೀಶ್ ವಹಿಸುವರು. ಮುಖ್ಯ ಅತಿಥಿಗಳಾಗಿ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕ ಕೊತ್ತುರು ಜಿ ಮಂಜುನಾಥ, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು ಮತ್ತು ಸಂಘದ ಪ್ರಮುಖರು ಭಾಗವಹಿಸಲಿದ್ದಾರೆ.
೨೦೨೫-೨೬ನೇ ಸಾಲಿನ ವಿವಿಧ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವೀರ ಯೋಧರಿಗೆ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಗೌರವ ಸನ್ಮಾನ, ಸಮುದಾಯದ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ವಿಶೇಷವಾಗಿ ಮನರಂಜನೆ ಕಾರ್ಯಕ್ರಮವನ್ನು ಗಿಚ್ಚಿ ಗಿಲಿ ಗಿಲಿ ತಂಡದವರಿಂದ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್