ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭೇಟಿ
ಬೆಂಗಳೂರು, 24 ಜುಲೈ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಲು ರಾಜ್ಯಪಾಲ ಡಾ. ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿಯವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು. ಇತ್ತೀಚೆಗೆ ವಯ
GovernorGehlot


ಬೆಂಗಳೂರು, 24 ಜುಲೈ (ಹಿ.ಸ.):

ಆ್ಯಂಕರ್:

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಲು ರಾಜ್ಯಪಾಲ ಡಾ. ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿಯವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು.

ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ವಿಧಿವಶರಾದ ಶ್ರೀಮತಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ರಾಜ್ಯಪಾಲರು, ದುಃಖತಪ್ತರಾಗಿರುವ ಎಚ್.ಡಿ. ದೇವೇಗೌಡರ ಸಾಂತ್ವನ ಹೇಳಿದರು.

ಈ ಅಗಲಿಕೆ ಇಡೀ ನಾಡಿಗೆ ಹಾಗೂ ಕುಟುಂಬಕ್ಕೆ ತುಂಬಲಾರದ ನಷ್ಟ ಎಂದು ತಿಳಿಸಿ, ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಸೇರಿದಂತೆ ಕುಟುಂಬದ ಪ್ರಮುಖ ಸದಸ್ಯರು ಉಪಸ್ಥಿತರಿದ್ದರು. ಕುಟುಂಬ ವರ್ಗದವರು ತಾಯಿಯವರ ಕೊನೆಯ ದಿನಗಳ ಆರೋಗ್ಯ ಸ್ಥಿತಿಯ ಕುರಿತು ರಾಜ್ಯಪಾಲರೊಂದಿಗೆ ಮಾಹಿತಿ ಹಂಚಿಕೊಂಡರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande