

ಬಳ್ಳಾರಿ, 24 ಜುಲೈ (ಹಿ.ಸ.)
ಆ್ಯಂಕರ್ : ರಾಜ್ಯಾದ್ಯಂತ ಸಮೃದ್ಧ ಮಳೆಗಾಗಿ ಬಳ್ಳಾರಿ ಜಿಲ್ಲಾ ಜೆಡಿಎಸ್ ಪಟೇಲ್ ನಗರ ಬಡಾವಣೆಯ ಶ್ರೀ ಸಣ್ಣ ದುರ್ಗಮ್ಮ ದೇವಾಲಯದಲ್ಲಿ ಜುಲೈ 27ರ ಸೋಮವಾರ ವಿಶೇಷ ವರುಣಯಾಗ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಜುಲೈ 27ರ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಹಿಳೆಯರಿಂದ 101 ಕಳಸ, ಪೂಜೆ - ಸಂಕಲ್ಪ, ರುದ್ರಾಭಿಷೇಕ, ಹೋಮ - ಹವನಗಳು ನಡೆಯಲಿವೆ. ಪೂಜೆಯ ನಂತರ, ಅನ್ನಸಂತರ್ಪಣೆ ನಡೆಯಲಿದೆ. ಸಾರ್ವಜನಿಕರು ಈ ಪೂಜೆಯಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶಗಳಿವೆ ಎಂದು ಅವರು ತಿಳಿಸಿದರು.
ಈ ಕುರಿತು ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೊನ್ನೂರುಸ್ವಾಮಿ, ರೈತ ಘಟಕದ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ರೆಡ್ಡಿ, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಅದ್ದಿಗೇರಿ ರಾಮಣ್ಣ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ವಸಂತಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜೆ.ಪುಷ್ಪಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮದಿರೆ ವಿಜಯಕುಮಾರ್, ಕಿರಣ್ ಕುಮಾರ್, ಕಂಪ್ಲಿ ವಿಧಾನಸಭೆ ಕ್ಷೇತ್ರದ ಅಧ್ಯಕ್ಷ ಏಳ್ಕೆ ಮೇಘರಾಜ್, ಸಿರುಗುಪ್ಪ ತಾಲೂಕು ಅಧ್ಯಕ್ಷ ಶಿವನಾರಾಯಣ, ಸಂಡೂರು ಅಧ್ಯಕ್ಷ ಹೊಸಗೇರಪ್ಪ, ಅವಂಭಾವಿ ಬಸವ, ಸಿಡಿಗಿನಮೊಳ ಗ್ರಾ.ಪಂ. ಅಧ್ಯಕ್ಷ ರುದ್ರಪ್ಪ, ಶಂಕರ ಬಂಡೆ ಗುರುಸ್ವಾಮಿ ಸೇರಿದಂತೆ ಅನೇಕ ಕಾರ್ಯಕರ್ತರು ಮುಖಂಡರು ಈ ಸಂದರ್ಭದಲ್ಲಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್