ಬಾಗಲಕೋಟೆ ಕೃಷಿ ಮಾರುಕಟ್ಟೆಗೆ ಉಪ ಲೋಕಾಯುಕ್ತರ ಭೇಟಿ
ಬಾಗಲಕೋಟೆ, 24 ಜುಲೈ (ಹಿ.ಸ.) ಆ್ಯಂಕರ್ : ರಾಜ್ಯದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಮಾರುಕಟ್ಟೆಯ ಕಾರ್ಯನಿರ್ವಹಣೆ, ಸ್ವಚ್ಛತೆ, ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತ
ಲೋಕ


ಬಾಗಲಕೋಟೆ, 24 ಜುಲೈ (ಹಿ.ಸ.)

ಆ್ಯಂಕರ್ : ರಾಜ್ಯದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಮಾರುಕಟ್ಟೆಯ ಕಾರ್ಯನಿರ್ವಹಣೆ, ಸ್ವಚ್ಛತೆ, ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಸ್ಥಳದಲ್ಲೇ ಪರಿಶೀಲನೆ ನಡೆಸಿದರು.

ಬೆಳಗಿನ ಜಾವವೇ ಮಾರುಕಟ್ಟೆಗೆ ಆಗಮಿಸಿದ ಉಪ ಲೋಕಾಯುಕ್ತರು ವ್ಯಾಪಾರಿಗಳು, ರೈತರು ಹಾಗೂ ಖರೀದಿದಾರರೊಂದಿಗೆ ನೇರವಾಗಿ ಸಂವಾದ ನಡೆಸಿ ಮಾರುಕಟ್ಟೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಮಾರುಕಟ್ಟೆಯಲ್ಲಿನ ಸ್ವಚ್ಛತಾ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯಗಳ ನಿರ್ವಹಣೆ, ವಾಹನ ನಿಲುಗಡೆ ವ್ಯವಸ್ಥೆ, ಸಂಚಾರದ ಅನುಕೂಲತೆ ಹಾಗೂ ರೈತರಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರು.

ಪರಿಶೀಲನೆ ವೇಳೆ ಮಾರುಕಟ್ಟೆ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈತರು ಮತ್ತು ವ್ಯಾಪಾರಿಗಳು ಯಾವುದೇ ರೀತಿಯ ಅನಗತ್ಯ ತೊಂದರೆ ಅನುಭವಿಸದಂತೆ ಪಾರದರ್ಶಕ ಆಡಳಿತ ವ್ಯವಸ್ಥೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧಿಕಾರಿಗಳು ಮಾರುಕಟ್ಟೆಯ ದೈನಂದಿನ ಕಾರ್ಯಚಟುವಟಿಕೆ, ತರಕಾರಿ ವಹಿವಾಟಿನ ಪ್ರಮಾಣ ಹಾಗೂ ಲಭ್ಯವಿರುವ ಮೂಲಸೌಕರ್ಯಗಳ ಕುರಿತು ಉಪ ಲೋಕಾಯುಕ್ತರಿಗೆ ಮಾಹಿತಿ ನೀಡಿದರು.

ಮಾರುಕಟ್ಟೆಯಲ್ಲಿ ಇರುವ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಉಪ ಲೋಕಾಯುಕ್ತರು ಸಾರ್ವಜನಿಕ ಸೇವೆಯ ಗುಣಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪರಿಶೀಲನೆ ವೇಳೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಎಪಿಎಂಸಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದು, ಉಪ ಲೋಕಾಯುಕ್ತರ ಸೂಚನೆಗಳನ್ನು ಅನುಷ್ಠಾನಗೊಳಿಸುವ ಭರವಸೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande