
ಮಡಿಕೇರಿ, 24 ಜುಲೈ (ಹಿ.ಸ.):
ಆ್ಯಂಕರ್:
ಬಿಡದಿಗೆ ಪ್ರತಿಭಟನಾ ರ್ಯಾಲಿಗೆ ಹೊರಟಿದ್ದ ಕೊಡಗಿನ ರೈತರನ್ನು ಗಡಿಭಾಗದಲ್ಲೇ ಪೊಲೀಸರು ತಡೆದಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದಲ್ಲಿ ನಡೆದಿದೆ.
ರೈತರ ವಾಹನಗಳನ್ನು ಪೊಲೀಸರು ತಡೆಯುತ್ತಿದ್ದಂತೆ ಆಕ್ರೋಶಗೊಂಡ ರೈತರು ರಸ್ತೆಯಲ್ಲೇ ಕುಳಿತು ಸರ್ಕಾರದ ವಿರುದ್ಧ ಧರಣಿ ಆರಂಭಿಸಿದರು. ಈ ವೇಳೆ ಪೊಲೀಸರು ಹಾಗೂ ರೈತ ಸಂಘಟನೆಯ ಪ್ರಮುಖರ ನಡುವೆ ಮಾತಿನ ಚಕಮಕಿ ನಡೆದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಯಾವುದೇಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪೊಲೀಸರ ನಿರ್ಬಂಧದ ನಡುವೆಯೂ ಹಿಂದೆ ಸರಿಯದ ರೈತರು, ತಮ್ಮ ಬೇಡಿಕೆ ಈಡೇರಿಸುವವರೆಗೆ ರಸ್ತೆಯಲ್ಲೇ ಪ್ರತಿಭಟನೆ ಮುಂದುವರೆಸುವುದಾಗಿ ಪಟ್ಟು ಹಿಡಿದು ಕುಳಿತಿದ್ದಾರೆ. ಸ್ಥಳದಲ್ಲಿ ರೈತರ ಆಕ್ರೋಶ ಮುಂದುವರೆದಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII