ಕೋಳೂರು ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಕುರುಗೋಡು, 24 ಜುಲೈ (ಹಿ.ಸ.) ಆ್ಯಂಕರ್ : ಕೋಳೂರು ಕ್ರಾಸ್ ನ 1 ನೇ ವಾರ್ಡ್ ನ ನಿವಾಸಿಯಾದ ಅಮರೇಶ (42) ಜುಲೈ 01 ರಂದು ಮನೆಯಿಂದ ಕಾಣೆಯಾಗಿದ್ದಾನೆ. ಕಾಣೆಯಾದವರು ಅಂದಾಜು 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಶರ್ಟ್
ಕೋಳೂರು  ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ಕುರುಗೋಡು, 24 ಜುಲೈ (ಹಿ.ಸ.)

ಆ್ಯಂಕರ್ : ಕೋಳೂರು ಕ್ರಾಸ್ ನ 1 ನೇ ವಾರ್ಡ್ ನ ನಿವಾಸಿಯಾದ ಅಮರೇಶ (42) ಜುಲೈ 01 ರಂದು ಮನೆಯಿಂದ ಕಾಣೆಯಾಗಿದ್ದಾನೆ.

ಕಾಣೆಯಾದವರು ಅಂದಾಜು 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.

ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೋಲೀಸ್ ಠಾಣೆಯ ದೂ.08392-263433, ಮೊ.9480803051, 9480803039 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸುವಂತೆ ಪೋಲಿಸ್ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande