
ಕೊಪ್ಪಳ , 24 ಜುಲೈ (ಹಿ.ಸ.)
ಆ್ಯಂಕರ್ : ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಪ್ಪಳ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜುಲೈ 25 ಮತ್ತು 26 ರಂದು ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪೂರ ಗ್ರಾಮದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿನ ಪೂಜ್ಯಶ್ರೀ ಶಿವಯೋಗಿ ಶಂಕರಲಿಂಗ ಪ್ರಧಾನ ವೇದಿಕೆಯಲ್ಲಿ ಆಯೋಜಿಸಲಾಗಿದೆ.
ಶೇಖರಗೌಡ ಮಾಲಿಪಾಟೀಲ ಅವರು ಕೊಪ್ಪಳ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸದರಾದ ರಾಜಶೇಖರ ಹಿಟ್ನಾಳ, ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹೆಚ್. ಪಾಟೀಲ, ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶರಣೇಗೌಡ ಪೋಲಿಸಪಾಟೀಲ್, ಕುಷ್ಟಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲೆಂಕಪ್ಪ ವಾಲಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿಗಳಾದ ಕೆ.ಎ. ದಯಾನಂದ ಅವರುಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್