ವಿಜಯಪುರ ಬಸ್ ನಿಲ್ದಾಣದ ಬಳಿ ಯುವಕನ ಶವ ಪತ್ತೆ
ವಿಜಯಪುರ, 24 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ಬಸ್ ನಿಲ್ದಾಣದ ಸಮೀಪ ತಡ ರಾತ್ರಿ 27 ವರ್ಷದ ಯುವಕನ ಶವ ನಿಗೂಢ ಪರಿಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮೃತನನ್ನು ಅಜರುಧಿನ (27) ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟ
ಸಾವು


ವಿಜಯಪುರ, 24 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ಬಸ್ ನಿಲ್ದಾಣದ ಸಮೀಪ ತಡ ರಾತ್ರಿ 27 ವರ್ಷದ ಯುವಕನ ಶವ ನಿಗೂಢ ಪರಿಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮೃತನನ್ನು ಅಜರುಧಿನ (27) ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಬಸ್ ನಿಲ್ದಾಣದ ಬಳಿ ಯುವಕನ ಶವ ಕಂಡುಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಅನುಮಾನಾಸ್ಪದ ಸಾವು, ಆತ್ಮಹತ್ಯೆ ಅಥವಾ ಇತರ ಯಾವುದೇ ಕಾರಣಗಳ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರ.

ಘಟನೆಯ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಕೆಲಕಾಲ ಕುತೂಹಲ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೃತನ ಕುಟುಂಬಸ್ಥರಿಗೂ ಮಾಹಿತಿ ನೀಡಲಾಗಿದ್ದು, ಅವರ ಹೇಳಿಕೆ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ.

ಇದರ ಜೊತೆಗೆ, ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಯುವಕ ಕೊನೆಯದಾಗಿ ಯಾರೊಂದಿಗೆ ಸಂಪರ್ಕದಲ್ಲಿದ್ದನು ಎಂಬ ಮಾಹಿತಿಯನ್ನೂ ಕಲೆಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಬೆಳಕಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande