
ಕೊಪ್ಪಳ, 24 ಜುಲೈ (ಹಿ.ಸ.)
ಆ್ಯಂಕರ್ : ಜಿಲ್ಲಾ ಹಾಗೂ ಕೊಪ್ಪಳ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ಜುಲೈ 25ರಂದು ಭಾಗ್ಯನಗರ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಚುಟುಕು ಸಾಹಿತ್ಯ ಅಭಿಯಾನ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಭಾಗ್ಯನಗರ ಸರಕಾರಿ ಪದವಿ ಪೂರ್ವ ಕಾಲೇಜು ಸಹಯೋಗದ ನೀಡಲಿದೆ.
ಚುಟುಕು ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ, ಕವಿಗೋಷ್ಠಿ ಹಾಗೂ ಸಾಂಸ್ಕೃರ್ತಿಕ ಕಾರ್ಯಕ್ರಮ ಜರುಗಲಿವೆ. ಕೊಪ್ಪಳ ಪದವಿ ಕಾಲೇಜಿನ ಉಪನ್ಯಾಸಕ ಡಾ. ರಾಜಕುಮಾರ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜಿನ ಉಪ ಪ್ರಾoಶುಪಾಲ ಮಂಜುನಾಥ್ ಎಚ್ ಕಿನ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ, ಪತ್ರಕರ್ತ ಜಿ. ಎಸ್. ಗೋನಾಳ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರುದ್ರಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಮಹಾಂತೇಶ್ ನೆಲಗಣಿ, ಸಂಘಟನಾ ಕಾರ್ಯದರ್ಶಿ ಶಿವ ಪ್ರಸಾದ್ ಹಾದಿಮನಿ, ಸಾಹಿತಿ ಎ. ಪಿ. ಅಂಗಡಿ ಹಾಗೂ ಶಾಲಾ ಭೋದಕರು ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಚುಟುಕು ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಮೈಲಾರಪ್ಪ ಉಂಕಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್