ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಜುಲೈ 26ರ ಭಾನುವಾರ
ಹೊಸಪೇಟೆ, 24 ಜುಲೈ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೇಂದ್ರ ಶಾಖೆ ಹಾಗೂ ವಿಜಯನಗರ-ಕೊಪ್ಪಳ ಜಿಲ್ಲಾ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ-2026’ ಅನ್ನು ಕೊಪ್ಪಳದ `ಸಾಹಿತ್ಯ ಭವನ’ದಲ
ಹೊಸಪೇಟೆ


ಹೊಸಪೇಟೆ, 24 ಜುಲೈ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೇಂದ್ರ ಶಾಖೆ ಹಾಗೂ ವಿಜಯನಗರ-ಕೊಪ್ಪಳ ಜಿಲ್ಲಾ ಶಾಖೆಗಳ ಸಂಯುಕ್ತಾಶ್ರಯದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ-2026’ ಅನ್ನು ಕೊಪ್ಪಳದ `ಸಾಹಿತ್ಯ ಭವನ’ದಲ್ಲಿ

ಜುಲೈ 26ರ ಭಾನುವಾರ ಬೆಳಿಗ್ಗೆ 11:00ಕ್ಕೆ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೌಡ ಅವರು

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ90%ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಸಂಘದ ಆನ್ ಲೈನ್ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಬೆಳಿಗ್ಗೆ 9:00ಕ್ಕೆ ಸ್ಥಳಕ್ಕೆ ಆಗಮಿಸಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ವಿಶೇಷ ಕೌಂಟರಿನಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಲು ಮನವಿ ಮಾಡಿದ್ದಾರೆ.

ಗವಿಸಿದ್ದೇಶ್ವರ ಮಾಹಾಸ್ವಾಮಿಗಳು, ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠ ಕೊಪ್ಪಳ ಇವರು ದಿವ್ಯ ಸಾನಿಧ್ಯವಹಿಸಿ ಪ್ರೇರಣಾನುಡಿಯನ್ನು ಹೇಳಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಉದ್ಘಾಟಿಸಲಿದ್ದಾರೆ.

ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಸಿ.ಎಸ್. ಷಡಕ್ಷರಿ, ಜನಪ್ರತಿನಿಧಿಗಳಾದ ಕೆ. ರಾಜಶೇಖರ ಹಿಟ್ನಾಳ, ಶ್ರೀಮತಿ ಹೇಮಲತಾ ನಾಯಕ, ಅಧಿಕಾರಿಗಳಾದ ಡಾ. ಸುರೇಶ ಬಿ.ಇಟ್ನಾಳ ವರ್ಣಿತ್ ನೇಗಿ ಇನ್ನಿತರರು ಮುಖ್ಯ ಅತಿಥಿಗಳಾಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande