ಬಳ್ಳಾರಿಯ ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ‘ಸುವರ್ಣ ಸಂಭ್ರಮ’
ಬಳ್ಳಾರಿ, 24 ಜುಲೈ (ಹಿ.ಸ.): ಆ್ಯಂಕರ್ : ಅತ್ಯಂತ ಸರಳ ಕನಸಿನೊಂದಿಗೆ ಆರಂಭವಾದ ಈ ಮಹಾವಿದ್ಯಾಲಯ ಇಂದು ಹೆಮ್ಮರವಾಗಿ ಬೆಳೆದಿದೆ. ಇಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ಇಂದು ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ಆಯುರ್ವೇದ ಸೇವೆ ಸಲ್ಲಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯ ಎ
Taranath Government Ayurveda College's 'Golden Jubilee'


Taranath Government Ayurveda College's 'Golden Jubilee'


ಬಳ್ಳಾರಿ, 24 ಜುಲೈ (ಹಿ.ಸ.):

ಆ್ಯಂಕರ್ : ಅತ್ಯಂತ ಸರಳ ಕನಸಿನೊಂದಿಗೆ ಆರಂಭವಾದ ಈ ಮಹಾವಿದ್ಯಾಲಯ ಇಂದು ಹೆಮ್ಮರವಾಗಿ ಬೆಳೆದಿದೆ. ಇಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ಇಂದು ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ಆಯುರ್ವೇದ ಸೇವೆ ಸಲ್ಲಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯ ಎಂದು ಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಡಾ. ಸೈಯದ್ ಅತ್ತಾರ್ ಫಾತಿಮಾ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ನಗರದ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸರ್ಕಾರಿ ಸೇವೆಯು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ‘ಸುವರ್ಣ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂಭ್ರಮವು ಕೇವಲ ಐವತ್ತು ವರ್ಷಗಳ ಆಚರಣೆಯಲ್ಲ, ಬದಲಾಗಿ ಶತಮಾನೋತ್ಸವದತ್ತ ಸಾಗುತ್ತಿರುವ ಸಂಸ್ಥೆಯ ಪರಿವರ್ತನೆಯ ಪಯಣವಾಗಿದೆ ಎಂದು ಅಭಿಮತ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ರಾಜಶೇಖರ್ ಎಸ್. ಗಾಣಿಗೇರ ಅವರು, ಈ ಸುವರ್ಣ ಸಂಭ್ರಮವು ಸಂಸ್ಥೆಯ ಸುದೀರ್ಘ ಸಾಧನೆಗಳನ್ನು ಸ್ಮರಿಸುವುದರ ಜೊತೆಗೆ ಶತಮಾನೋತ್ಸವದತ್ತ ಸಾಗುವ ಅಭಿವೃದ್ಧಿಯ ಪಯಣಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ಅಭಿಪ್ರಾಯಪಟ್ಟರು.

ಕೆಎಂಇಆರ್ಸಿ ಅನುದಾನದಡಿ ನಡೆಯುತ್ತಿರುವ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮಹಾವಿದ್ಯಾಲಯದ ಶೈಕ್ಷಣಿಕ ಮತ್ತು ಆಸ್ಪತ್ರೆಯ ಸೇವಾವಿಸ್ತರಣೆಯ ಕುರಿತು ವಿವರಣೆ ನೀಡಿದ ಅವರು ಸಂಸ್ಥೆಯ ಸವಾರ್ಂಗೀಣ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಪಂಡಿತ್ ತಾರಾನಾಥ್ ಅವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ:

ಸುವರ್ಣ ಸಂಭ್ರಮದ ಅಂಗವಾಗಿ, ಸಂಸ್ಥೆಯ ಸಂಸ್ಥಾಪಕರಾದ ವೈದ್ಯರತ್ನ ಪಂಡಿತ್ ತಾರಾನಾಥ್ ಅವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಸಂಸ್ಥೆಯ ಆವರಣದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ಮರಿದೇವ ಶರ್ಮಾ, ವೈದ್ಯರತ್ನ ತಾರಾನಾಥ ಅವರ ಸ್ಮರಣಾರ್ಥ ಮಹಾವಿದ್ಯಾಲಯದ ಆವರಣದಲ್ಲಿ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಈ ಪುತ್ಥಳಿಯು ಸಂಸ್ಥಾಪಕರ ಆದರ್ಶ ಹಾಗೂ ಸಂಸ್ಥೆಯ ವೈಭವಶಾಲಿ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಶಾಶ್ವತ ಸ್ಮಾರಕವಾಗಲಿದೆ ಎಂದು ತಿಳಿಸಿದರು.

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ರಾಜಶೇಖರ್ ಎಸ್. ಗಾಣಿಗೇರ ಅವರು ಮಾತನಾಡಿ, ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಈ ಭೂಮಿಪೂಜೆಯು ಸಂಸ್ಥೆಯ ಇತಿಹಾಸದಲ್ಲೇ ಅತ್ಯಂತ ಮಹತ್ವದ ಮೈಲಿಗಲ್ಲಾಗಿದೆ. ಹಲವಾರು ಏಳು-ಬೀಳುಗಳನ್ನು ದಾಟಿ ಹೆಮ್ಮರವಾಗಿ ಬೆಳೆದಿರುವ ಈ ಸಂಸ್ಥೆಯು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಯುರ್ವೇದ ಶಿಕ್ಷಣ ಹಾಗೂ ಲಕ್ಷಾಂತರ ರೋಗಿಗಳಿಗೆ ಆರೋಗ್ಯ ಸೇವೆ ನೀಡುವ ಮೂಲಕ ಸಮಾಜದಲ್ಲಿ ವಿಶಿಷ್ಟ ಸ್ಥಾನ ಗಳಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆರ್.ಎಂ.ಓ ಡಾ.ಎಸ್.ಎಂ.ಕೊಟ್ರೇಶ್ ಉಪಸ್ಥಿತರಿದ್ದರು. ಡಾ. ಕೃಷ್ಣ ನಾಯಕ್ ಸ್ವಾಗತಿಸಿದರು. ಡಾ. ಶಿವು ಅರಕೆರಿ ಮತ್ತು ಡಾ. ಅಶ್ವಿನಿ ಹಳ್ಳದ್ ನಿರೂಪಿಸಿದರು. ಡಾ. ಮಮತಶ್ರೀ ವಂದಿಸಿದರು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಅನೇಕ ಹಿರಿಯ ಹಾಗೂ ಅತ್ಯಂತ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ, ಸಂಸ್ಥೆಯೊಂದಿಗಿನ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಳ್ಳುವ ಮೂಲಕ ಸುವರ್ಣ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande