
ಬೆಂಗಳೂರು, 24 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯ ಸರ್ಕಾರವು ಐಎಎಸ್ ಹಾಗೂ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಾಗಿದ್ದ ರವಿ ಕುಮಾರ್ ಎಂ.ಆರ್. ಅವರನ್ನು ಆಗಸ್ಟ್ 1ರಿಂದ ಜಾರಿಗೆ ಬರುವಂತೆ ಕೋಲಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಾಲಿ ಜಿಲ್ಲಾಧಿಕಾರಿ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (ಕೆಎಸ್‌ಎಂಎಸ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಹುಲ್ ರತ್ನಂ ಪಾಂಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಇದೇ ವೇಳೆ, ಆರ್ಥಿಕ ಮತ್ತು ಸಂಖ್ಯಾ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿದ್ದ ಎ.ಆರ್. ರವಿ ಅವರನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.