ವಸತಿ ಸಮಿತಿಗೆ ನಾಮನಿರ್ದೇಶನ:ಸರ್ಕಾರಕ್ಕೆ ಉಮೇಶ್ ಮೇಟಿ ಕೃತಜ್ಞತೆ
ಬಾಗಲಕೋಟೆ, 24 ಜುಲೈ (ಹಿ.ಸ.): ಆ್ಯಂಕರ್ : ರಾಜ್ಯ ಸರ್ಕಾರದ ''ವಸತಿ ಸಮಿತಿ''ಗೆ ನಾಮನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರು, ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ
Heappy


ಬಾಗಲಕೋಟೆ, 24 ಜುಲೈ (ಹಿ.ಸ.):

ಆ್ಯಂಕರ್ : ರಾಜ್ಯ ಸರ್ಕಾರದ 'ವಸತಿ ಸಮಿತಿ'ಗೆ ನಾಮನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರು, ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ ಜನರ ಸೇವೆ ಮಾಡುವ ಮತ್ತೊಂದು ಮಹತ್ವದ ಅವಕಾಶವನ್ನು ನೀಡಿರುವುದಕ್ಕೆ ಮುಖ್ಯಮಂತ್ರಿ ಹಾಗೂ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ತಮ್ಮ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿಯನ್ನು ವಹಿಸಿರುವ ಸರ್ಕಾರದ ನಿರ್ಧಾರವು ತಮ್ಮ ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಹೊಣೆಗಾರಿಕೆಯನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ 'ವಸತಿ ಸಮಿತಿ'ಗೆ ನನ್ನನ್ನು ನಾಮನಿರ್ದೇಶನ ಮಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ನನ್ನ ಮೇಲೆ ವಿಶ್ವಾಸವಿಟ್ಟು ಈ ಮಹತ್ವದ ಜವಾಬ್ದಾರಿಯನ್ನು ನೀಡಿರುವ ಸರ್ಕಾರಕ್ಕೆ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಸದಾ ಚಿರಋಣಿಯಾಗಿದ್ದೇನೆ.

ಜನರ ನಿರೀಕ್ಷೆಗೆ ತಕ್ಕಂತೆ ಈ ಜವಾಬ್ದಾರಿಯನ್ನು ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಜನಪರ ದೃಷ್ಟಿಕೋನದಿಂದ ನಿರ್ವಹಿಸಲು ನಾನು ಬದ್ಧನಾಗಿದ್ದೇನೆ ಎಂದು ಉಮೇಶ್ ಮೇಟಿ ಹೇಳಿದ್ದಾರೆ.

ರಾಜ್ಯದ ವಸತಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳ ತಲುಪುವಿಕೆ ಹಾಗೂ ವಸತಿ ಕ್ಷೇತ್ರದಲ್ಲಿ ಜನಸ್ನೇಹಿ ಆಡಳಿತಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.

ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸುವುದರ ಜೊತೆಗೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಪಕ್ಷದ ನಾಯಕರು, ಕಾರ್ಯಕರ್ತರು, ಕ್ಷೇತ್ರದ ಮತದಾರರು ಹಾಗೂ ಶುಭಾಶಯ ಕೋರಿದ ಎಲ್ಲರಿಗೂ ಉಮೇಶ್ ಮೇಟಿ ಅವರು ಕೃತಜ್ಞತೆ ಸಲ್ಲಿಸಿ, ಇದೇ ರೀತಿಯ ಪ್ರೋತ್ಸಾಹ ಮತ್ತು ಸಹಕಾರ ಮುಂದೆಯೂ ಇರಲಿ ಎಂದು ಆಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande