ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರಿಂದ ವಿಡಿಯೋ ಸಂವಾದ ಸಭೆ
ಗದಗ, 24 ಜುಲೈ (ಹಿ.ಸ.) ಆ್ಯಂಕರ್: ಉಪಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ದೂರು ದಾಖಲಾದ ಪ್ರಕರಣಗಳ ಕುರಿತಂತೆ ವಿಡಿಯೋ ಸಂವಾದ ಸಭೆಯನ್ನು ಜರುಗಿಸಿದರು. ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಮಾತನಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳಿಗೆ ತ್ವರಿತವಾಗಿ ಪರಿಹಾರ ಒ
ಫೋಟೋ


ಗದಗ, 24 ಜುಲೈ (ಹಿ.ಸ.)

ಆ್ಯಂಕರ್: ಉಪಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ದೂರು ದಾಖಲಾದ ಪ್ರಕರಣಗಳ ಕುರಿತಂತೆ ವಿಡಿಯೋ ಸಂವಾದ ಸಭೆಯನ್ನು ಜರುಗಿಸಿದರು.

ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಮಾತನಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವುದು ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ತಿಳಿಸಿದರು.

ಉಪಲೋಕಾಯುಕ್ತರ ಜಿಲ್ಲಾ ಪ್ರವಾಸ : ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಗದಗ ಜಿಲ್ಲೆಗೆ ಅಗಸ್ಟ್ 5 ರಂದು ಸಾಯಂಕಾಲ ಆಗಮಿಸಲಿದ್ದಾರೆ. ಅಗಸ್ಟ್ 6 ರಂದು ಸಾರ್ವಜನಿಕರಿಂದ ದಾಖಲಾಗಿರುವ ದೂರುಗಳ ಪರಿಶೀಲನೆ ಕೈಗೊಳ್ಳುವರು. ಅಗಸ್ಟ್ 7 ರಂದು ಜಿಲ್ಲೆಯ ವಿವಿಧ ಕಚೇರಿಗಳಿಗೆ ಅನಿರೀಕ್ಷಿತ ತಪಾಸಣೆ ನಡೆಸಲಿದ್ದಾರೆ ಎಂದು ಸಂವಾದ ಸಭೆಯಲ್ಲಿ ತಿಳಿಸಿದರು.

ವಿಡಿಯೋ ಸಂವಾದ ಸಭೆಯಲ್ಲಿ ಗದಗ ಜಿಲ್ಲೆಯಿಂದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಪಾಲ್ಗೊಂಡು ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ಸಮಯಪಾಲನೆ ಅತ್ಯಂತ ಅವಶ್ಯಕವಾಗಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರೊಂದಿಗೆ ಸಾರ್ವಜನಿಕರಿಗೆ ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವಲ್ಲಿ ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ ಮಾಡಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದನಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ದೂರುಗಳ ಕುರಿತಂತೆ ಹಾಗೂ ಈವರೆಗೆ ಕೈಗೊಂಡ ಕ್ರಮಗಳ ಕುರಿತಂತೆ ಇಲಾಖಾವಾರು ಮಾಹಿತಿಯನ್ನು ಸಭೆಯಲ್ಲಿ ಅಧಿಕಾರಿಗಳು ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ , ಡಿವೈಎಸ್ಪಿ ಮಹಾಂತೇಶ ಸಜ್ಜನರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande