
ಮಡಿಕೇರಿ, 24 ಜುಲೈ (ಹಿ.ಸ.):
ಆ್ಯಂಕರ್:
ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ರೈತರು ಮತ್ತು ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಸುಂಟಿಕೊಪ್ಪದ ಲಕ್ಷ್ಮೀ ಎಸ್ಟೇಟ್ನ ಅಜ್ಜಿತೋಟದಲ್ಲಿ ನುಗ್ಗಿದ ಕಾಡಾನೆಗಳ ಹಿಂಡು, ನೂರಕ್ಕೂ ಹೆಚ್ಚು ಕಾಫಿಗಿಡಗಳನ್ನು ತುಳಿದು ಧ್ವಂಸಗೊಳಿಸಿವೆ.
ಸುಂಟಿಕೊಪ್ಪ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ಈ ತೋಟದಲ್ಲಿ, ಹಲವು ವರ್ಷಗಳ ಕಾಲ ಬೆಳೆಸಿದ ಬೆಳೆ ಕ್ಷಣಮಾತ್ರದಲ್ಲಿ ನಾಶವಾಗಿರುವುದರಿಂದ ಬೆಳೆಗಾರರು ತೀವ್ರ ನಷ್ಟ ಅನುಭವಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಿರಂತರವಾಗಿ ಆನೆಗಳ ಸಂಚಾರವಿರುವುದರಿಂದ, ಶಾಲೆಯ ಸಮೀಪವೇ ಆನೆಗಳು ಓಡಾಡುತ್ತಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ.
ಸತತವಾಗಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷವನ್ನು ತಡೆಯಲು ಅರಣ್ಯ ಇಲಾಖೆ ಶಾಶ್ವತ ಕ್ರಮ ಕೈಗೊಳ್ಳಬೇಕು ಹಾಗೂ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಮತ್ತು ಕೃಷಿಕರು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII