ಎಸ್ಐಆರ್ ಪ್ರಕ್ರಿಯೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಭಾಗಿ
ವಿಜಯಪುರ, 24 ಜುಲೈ (ಹಿ.ಸ.) ಆ್ಯಂಕರ್ : ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಡನೂರಿನ ತಮ್ಮ ನಿವಾಸದಲ್ಲಿ ನಡೆದ ಪರಿಶೀಲನಾ ಕಾರ್ಯದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಭಾಗವಹಿಸಿ, ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು
ಎಂ ಈ ಏ


ವಿಜಯಪುರ, 24 ಜುಲೈ (ಹಿ.ಸ.)

ಆ್ಯಂಕರ್ :

ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಡನೂರಿನ ತಮ್ಮ ನಿವಾಸದಲ್ಲಿ ನಡೆದ ಪರಿಶೀಲನಾ ಕಾರ್ಯದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಭಾಗವಹಿಸಿ, ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸುವ ಮೂಲಕ ತಮ್ಮ ನಾಗರಿಕ ಕರ್ತವ್ಯವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾನವು ಪ್ರತಿಯೊಬ್ಬ ಭಾರತೀಯ ನಾಗರಿಕನ ಅತ್ಯಮೂಲ್ಯ ಸಾಂವಿಧಾನಿಕ ಹಕ್ಕಾಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಸರಿಯಾಗಿ ದಾಖಲಾಗಿರುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಪ್ರಮುಖ ಹಂತವಾಗಿದೆ. ಹೊಸ ಮತದಾರರ ಸೇರ್ಪಡೆ, ವಿಳಾಸ ಬದಲಾವಣೆ, ತಿದ್ದುಪಡಿ ಹಾಗೂ ಇತರೆ ಮಾಹಿತಿಗಳ ನವೀಕರಣಕ್ಕಾಗಿ ಈ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ನಮ್ಮ ಮತದಲ್ಲಿದೆ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜವಾಬ್ದಾರಿಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು, ಎಂದು ಯಶವಂತರಾಯಗೌಡ ಪಾಟೀಲ ಕರೆ ನೀಡಿದರು.

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ದಾಖಲಾಗಿರುವುದನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಚುನಾವಣಾ ಆಯೋಗದ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕೆಂದು ಅವರು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande