
ಬೆಂಗಳೂರು, 25 ಜುಲೈ (ಹಿ.ಸ.):
ಆ್ಯಂಕರ್:
ಕರ್ನಾಟಕದ ಸರ್ಕಾರಿ ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಬಳಕೆಯನ್ನು ಉತ್ತೇಜಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಅತ್ಯಾಧುನಿಕ ‘ಕರ್ನಾಟಕ ಪಬ್ಲಿಕ್ ಶಾಲೆ’ ಗಳಾಗಿ ಪರಿವರ್ತಿಸಲು ಆರ್ಥಿಕ ನೆರವು ನೀಡಿರುವ ʻಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನ ಉನ್ನತ ಅಧಿಕಾರಿಗಳ ನಿಯೋಗವು ಜುಲೈ 25 ರಂದು ಬೆಂಗಳೂರಿನಲ್ಲಿ ಮಹತ್ವದ ಭೇಟಿ ನೀಡಿದೆ.
ಮಲ್ಲೇಶ್ವರಂನ 18ನೇ ಕ್ರಾಸ್ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ವಿದೇಶಿ ನಿಯೋಗವು, ವಿದ್ಯಾರ್ಥಿಗಳ ನಿಖರ ಹಾಜರಾತಿಗಾಗಿ ಶಿಕ್ಷಣ ಇಲಾಖೆ ಜಾರಿಗೆ ತಂದಿರುವ ʻನಿರಂತರʼ ಎಐ ಆಧಾರಿತ ಮುಖ ಚಹರೆ ಗುರುತಿಸುವ ತಂತ್ರಜ್ಞಾನದ ಕಾರ್ಯವೈಖರಿಯನ್ನು ಖುದ್ದಾಗಿ ಪರಿಶೀಲಿದರು.
ಉಪನ್ಯಾಸಕರು ಡಿಜಿಟಲ್ ಹಾಜರಾತಿ ಪಡೆಯುವ ವಿಧಾನವನ್ನು ನೇರ ಪ್ರಾತ್ಯಕ್ಷಿಕೆ ಮೂಲಕ ವೀಕ್ಷಿಸಿದ ನಿಯೋಗ, ತಂತ್ರಜ್ಞಾನದ ಪಾರದರ್ಶಕತೆ ಹಾಗೂ ಸಮಯ ಉಳಿತಾಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.
ಈ ಉನ್ನತ ಮಟ್ಟದ ನಿಯೋಗದಲ್ಲಿ ಎಡಿಬಿ ಬ್ಯಾಂಕಿನ ಹಿರಿಯ ಪ್ರಾಜೆಕ್ಟ್ ಆಫೀಸರ್ ಪೂನಂ ಎಸ್. ಭಾಂಬ್ರಿ, ಖುಷ್ಬೂ ಚೌಧರಿ ಮತ್ತು ಸಂಗೀತಾ ಡೇ ಉಪಸ್ಥಿತರಿದ್ದರು. ಈ ಡಿಜಿಟಲ್ ಕ್ರಾಂತಿಯು ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII