ಬೆಂಗಳೂರು ಉತ್ತರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಯಶಸ್ವಿ: ಥಣಿಸಂದ್ರ ರಸ್ತೆ ಕಸಮುಕ್ತ
ಬೆಂಗಳೂರು, 25 ಜುಲೈ (ಹಿ.ಸ.): ಆ್ಯಂಕರ್: ರಾಜಧಾನಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಂಡಿರುವ ವಿಶೇಷ ಅಭಿಯಾನವು ಯಶಸ್ವಿಯಾಗಿ ಮುಂದುವರಿದಿದೆ. ಬೆಂಗಳೂರು ಉತ್ತರ ಪಾಲಿಕೆ ವ್ಯಾಪ್ತಿಯಲ್ಲಿ ನಿಗದಿಪಡಿಸಿದ 45 ದಿನಗಳಲ್ಲಿ 100 ಬ್ಲಾಕ್ ಸ್ಪಾಟ್ (ಕಸದ ತೊಟ್ಟಿಗಳು/ಪ್ರದೇಶಗಳು) ಸ್ವಚ್ಛಗ
BengaluruCleanliness-Thanisan


ಬೆಂಗಳೂರು, 25 ಜುಲೈ (ಹಿ.ಸ.):

ಆ್ಯಂಕರ್:

ರಾಜಧಾನಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಂಡಿರುವ ವಿಶೇಷ ಅಭಿಯಾನವು ಯಶಸ್ವಿಯಾಗಿ ಮುಂದುವರಿದಿದೆ. ಬೆಂಗಳೂರು ಉತ್ತರ ಪಾಲಿಕೆ ವ್ಯಾಪ್ತಿಯಲ್ಲಿ ನಿಗದಿಪಡಿಸಿದ 45 ದಿನಗಳಲ್ಲಿ 100 ಬ್ಲಾಕ್ ಸ್ಪಾಟ್ (ಕಸದ ತೊಟ್ಟಿಗಳು/ಪ್ರದೇಶಗಳು) ಸ್ವಚ್ಛಗೊಳಿಸುವ ಬೃಹತ್ ಅಭಿಯಾನದ ಭಾಗವಾಗಿ, ನೂರನೇ ಸ್ಥಳವಾಗಿ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಬಿದ್ದಿದ್ದ ಹಳೆ ಕಸವನ್ನು ಸಂಪೂರ್ಣವಾಗಿ ತೆರವುಗೊಳಿಸಿ ರಸ್ತೆಯನ್ನು ಕಸಮುಕ್ತವನ್ನಾಗಿ ಪರಿವರ್ತಿಸಲಾಗಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಖುದ್ದಾಗಿ ಭಾಗವಹಿಸಿ ಶ್ರಮದಾನ ಮಾಡಿದರು. ಅಲ್ಲದೆ, ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ರಸ್ತೆಗಳಲ್ಲಿ ಅಥವಾ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಿದರು. ನಾಗರಿಕರು ಸ್ವಚ್ಛತೆಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande