
ಬೆಂಗಳೂರು, 25 ಜುಲೈ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಂಗಳೂರು ವಿಭಾಗ ಮಟ್ಟದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಚಿತ್ರದುರ್ಗದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ, ರೈತರ ಹಿತಾಸಕ್ತಿ ಮತ್ತು ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಜಿಲ್ಲಾವಾರು ಪರಿಸ್ಥಿತಿಯ ಮಾಹಿತಿ ನೀಡಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.