ಎಸ್ಐಆರ್: ಜುಲೈ 25 ರವರೆಗೆ 10,21,646 ಗಣತಿ ನಮೂನೆಗಳ ಡಿಜಿಟಲೀಕರಣ
ಕೊಪ್ಪಳ , 25 ಜುಲೈ (ಹಿ.ಸ.): ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 25ರ ಸಂಜೆ 06 ಗಂಟೆಯವರೆಗೆ ಒಟ್ಟು 10,21,646 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗ
ಎಸ್ಐಆರ್: ಜುಲೈ 25 ರವರೆಗೆ 10,21,646 ಗಣತಿ ನಮೂನೆಗಳ ಡಿಜಿಟಲೀಕರಣ


ಕೊಪ್ಪಳ , 25 ಜುಲೈ (ಹಿ.ಸ.):

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 25ರ ಸಂಜೆ 06 ಗಂಟೆಯವರೆಗೆ ಒಟ್ಟು 10,21,646 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 10,21,646 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande