ಜುಲೈ 27 ಮತ್ತು 28 ರಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ , 25 ಜುಲೈ (ಹಿ.ಸ.): ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ ಅವರು ಜುಲೈ 27 ಮತ್ತು 28 ರಂದು ಎರಡು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು
ಜುಲೈ 27 ಮತ್ತು 28 ರಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರ ಕೊಪ್ಪಳ ಜಿಲ್ಲಾ ಪ್ರವಾಸ


ಕೊಪ್ಪಳ , 25 ಜುಲೈ (ಹಿ.ಸ.):

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ ಅವರು ಜುಲೈ 27 ಮತ್ತು 28 ರಂದು ಎರಡು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅಧ್ಯಕ್ಷರು ಜುಲೈ 27 ರಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಮಧ್ಯಾಹ್ನ 12 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಅಧಿಕಾರಿಗಳೊಂದಿಗೆ ವಿವಿಧ ಘಟಕಗಳನ್ನು ವೀಕ್ಷಣೆ ಮಾಡುವರು. ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಜುಲೈ 28 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಧಿಕಾರಿಗಳೊಂದಿಗೆ ವಿವಿಧ ಘಟಕಗಳ ವೀಕ್ಷಣೆ ಮಾಡುವರು. ಮಧ್ಯಾಹ್ನ 1 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸುವರು.

ಜುಲೈ 27 ರಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande