ಹಸಿರು ಗ್ರಾಮ–ಉದ್ಯೋಗಯುಕ್ತ ಗ್ರಾಮ: ಫಲವೃಕ್ಷೋದ್ಯಾನ ಅಭಿವೃದ್ಧಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, 25 ಜುಲೈ (ಹಿ.ಸ.): ಆ್ಯಂಕರ್:ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಮೀನುಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ''ಫಲವೃಕ್ಷೋದ್ಯಾನ'' ಅಭಿವೃದ್ಧಿಪಡಿಸಿ, ಅವುಗಳನ್ನು ವಾರ್ಷಿಕ ಪಾರದರ್ಶಕ ಹರಾಜಿನ ಮೂಲಕ ಅದೇ ಗ್ರಾಮದ ಯುವಕರಿಗೆ ಗುತ್ತಿಗೆ ನೀಡಲು ಕ್ರಿಯಾಯೋಜನೆ ರೂಪಿಸುವಂತೆ ಗ್ರಾಮೀಣಾಭಿವೃ
ಖಂಡ್ರೆ ಪತ್ರ


ಬೆಂಗಳೂರು, 25 ಜುಲೈ (ಹಿ.ಸ.):

ಆ್ಯಂಕರ್:ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಮೀನುಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 'ಫಲವೃಕ್ಷೋದ್ಯಾನ' ಅಭಿವೃದ್ಧಿಪಡಿಸಿ, ಅವುಗಳನ್ನು ವಾರ್ಷಿಕ ಪಾರದರ್ಶಕ ಹರಾಜಿನ ಮೂಲಕ ಅದೇ ಗ್ರಾಮದ ಯುವಕರಿಗೆ ಗುತ್ತಿಗೆ ನೀಡಲು ಕ್ರಿಯಾಯೋಜನೆ ರೂಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಾವು, ಸಪೋಟ, ಬೆಟ್ಟನೆಲ್ಲಿಕಾಯಿ, ತೆಂಗು, ಹೈಬ್ರಿಡ್ ನೇರಳೆ, ಹುಣಸೆ ಸೇರಿದಂತೆ ವಿವಿಧ ಫಲವೃಕ್ಷಗಳನ್ನು ಬೆಳೆಸುವ ಮೂಲಕ ಗ್ರಾಮಗಳಲ್ಲಿ ಹಸಿರು ಹೊದಿಕೆ ಹೆಚ್ಚುವುದರ ಜೊತೆಗೆ ನಿರುದ್ಯೋಗಿ ಹಾಗೂ ಭೂರಹಿತ ಯುವಕರಿಗೆ ಉದ್ಯೋಗ ಮತ್ತು ಆದಾಯದ ಅವಕಾಶ ಕಲ್ಪಿಸುವುದು ಯೋಜನೆಯ ಉದ್ದೇಶವಾಗಿದೆ. ಇದರಿಂದ ಗ್ರಾಮ ಪಂಚಾಯಿತಿ ಮತ್ತು ಕಂದಾಯ ಇಲಾಖೆಗೆ ಆದಾಯ ದೊರೆಯುವುದರೊಂದಿಗೆ ಸರ್ಕಾರಿ ಜಮೀನುಗಳ ಒತ್ತುವರಿಗೂ ತಡೆ ಬೀಳಲಿದೆ ಎಂದು ಅವರು ತಿಳಿಸಿದ್ದಾರೆ.

ಇದರ ಜೊತೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆ ಹಾಗೂ ಸಂಪರ್ಕ ರಸ್ತೆಗಳ ಎರಡೂ ಬದಿಗಳಲ್ಲಿ ಉಪಯುಕ್ತ ಫಲವೃಕ್ಷಗಳನ್ನು ನೆಟ್ಟು, ಅವುಗಳ ಫಲದ ಆದಾಯವನ್ನು ವಾರ್ಷಿಕ ಹರಾಜಿನ ಮೂಲಕ ಸ್ಥಳೀಯರಿಗೆ ಗುತ್ತಿಗೆ ನೀಡುವ ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಲಾಗಿದೆ.

ಈ ಯೋಜನೆಯನ್ನು ವಿಬಿಜಿ ರಾಮ್ ಜಿ ಸಹಯೋಗದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಿಯಾಯೋಜನೆ ರೂಪಿಸಲು ಸಚಿವರು ನಿರ್ದೇಶನ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande