
ಮಂಗಳೂರು, 25 ಜುಲೈ (ಹಿ.ಸ.):
ಆ್ಯಂಕರ್:
ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಇಂದು ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸಹ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿ, ಡಿಪ್ಲೊಮಾ ಹಾಗೂ ಐಟಿಐ ಸೇರಿದಂತೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.