ದಿ.ಕೆ.ಆರ್.ಪೇಟೆ ಕೃಷ್ಣಾ ಜನ್ಮದಿನ ಸ್ಮರಣಾರ್ಥ ಸಾಧಕರಿಗೆ ಕೃಷ್ಣಾ ಪುರಸ್ಕಾರ ಪ್ರದಾನ: ಸಿದ್ದರಾಮಯ್ಯ ಭಾಗಿ
ಮಂಡ್ಯ , 25 ಜುಲೈ (ಹಿ.ಸ.) ಆ್ಯಂಕರ್: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಇಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ದಿವಂಗತ ಕೆ.ಆರ್.ಪೇಟೆ ಕೃಷ್ಣಾ ಅವರ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ವಿಶೇಷ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಯಾಗಿ
KRPeteKrishna #Siddaramaiah


ಮಂಡ್ಯ , 25 ಜುಲೈ (ಹಿ.ಸ.)

ಆ್ಯಂಕರ್:

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಇಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ದಿವಂಗತ ಕೆ.ಆರ್.ಪೇಟೆ ಕೃಷ್ಣಾ ಅವರ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ಈ ವಿಶೇಷ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ನಮನ ಸಲ್ಲಿಸಿದರು.

ಇದೇ ವೇದಿಕೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ 'ಕೃಷ್ಣಾ ಪುರಸ್ಕಾರ' ನೀಡಿ ಗೌರವಿಸಲಾಯಿತು. ಅಲ್ಲದೆ, ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರತಿಭೆ ತೋರಿದ ವಿದ್ಯಾರ್ಥಿಗಳಿಗೆ 'ಪ್ರತಿಭಾ ಪುರಸ್ಕಾರ' ವಿತರಿಸಿ ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ಹಾಗೂ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ನಾರಾಯಣಗೌಡ, ಚೆಲುವರಾಯಸ್ವಾಮಿ ಹಾಗೂ ದಿವಂಗತ ಕೃಷ್ಣಾ ಅವರ ಧರ್ಮಪತ್ನಿ ಶ್ರೀಮತಿ ಇಂದಿರಮ್ಮ ಕೃಷ್ಣಾ ಅವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande