
ಮಡಿಕೇರಿ , 25 ಜುಲೈ (ಹಿ.ಸ.):
ಆ್ಯಂಕರ್:
ದೇಶಾದ್ಯಂತ ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ತೀವ್ರವಾಗಿ ಖಂಡಿಸಿ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ವಾಯ್ಸ್ ಆಫ್ ಯೂತ್ ಸಂಘಟನೆಯು ಮೌನ ಪ್ರತಿಭಟನೆಯನ್ನು ನಡೆಸಿತು.
ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಜಮಾಯಿಸಿದ ಯುವ ಸಮೂಹವು, ಕೈಯಲ್ಲಿ ಕಪ್ಪು ಬ್ಯಾನರ್ಗಳನ್ನು ಹಿಡಿದು ಮೌನವಾಗಿ ನಿಲ್ಲುವ ಮೂಲಕ ತಮ್ಮ ತೀವ್ರ ಆಕ್ರೋಶವನ್ನು ಹೊರಹಾಕಿತು. ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಆಗಿರುವ ಅವ್ಯವಹಾರಗಳ ಕುರಿತು ಕೇಂದ್ರ ಸರ್ಕಾರವು ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII