ವಿಜಯಪುರ ಜಿಲ್ಲೆ ಬರಪೀಡಿತ ಎಂದು ಘೋಷಿಸಲು ಜಿಲ್ಲಾ ಕೃಷಿಕ ಸಮಾಜ ಆಗ್ರಹ
ವಿಜಯಪುರ, 25 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ತುರ್ತು ಬರ ಪರಿಹಾರ ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿಕ ಸಮಾಜ ಒತ್ತಾಯಿಸಿದೆ. ಈ ಕುರಿತು ಜಿಲ್ಲಾ ಕೃಷಿಕ ಸಮಾಜದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಜಿಲ
ಮನವಿ


ವಿಜಯಪುರ, 25 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ತುರ್ತು ಬರ ಪರಿಹಾರ ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿಕ ಸಮಾಜ ಒತ್ತಾಯಿಸಿದೆ. ಈ ಕುರಿತು ಜಿಲ್ಲಾ ಕೃಷಿಕ ಸಮಾಜದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು ಎಂದು ಬಿಜೆಪಿ ಹಾಗೂ ರೈತ ಮುಖಂಡ ಸಂಜಯ್ ಪಾಟೀಲ್ ಕನಮಡಿ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಕೃಷಿಕ ಸಮಾಜದ ಮುಖಂಡರು, ಜಿಲ್ಲೆಯಲ್ಲಿ ಈ ಬಾರಿ ಸಮರ್ಪಕ ಮಳೆಯಾಗದ ಪರಿಣಾಮ ತೊಗರಿ, ಗೊಂಜಾಳ ಸೇರಿದಂತೆ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು. ಬೆಳೆ ನಷ್ಟದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಅಧಿಕಾರಿಗಳನ್ನು ಎಲ್ಲ ತಾಲೂಕುಗಳಿಗೆ ಕಳುಹಿಸಿ ಬೆಳೆ ಹಾನಿಯ ವಾಸ್ತವ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

ಪರಿಶೀಲನೆ ವರದಿಯ ಆಧಾರದ ಮೇಲೆ ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ಶೀಘ್ರದಲ್ಲೇ ಬರ ಪರಿಹಾರ, ಬೆಳೆ ನಷ್ಟ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.

ಸಭೆಯಲ್ಲಿ ಭೀಮಾ ನದಿ ತೀರ ಪ್ರದೇಶದಲ್ಲೂ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತವಾಯಿತು. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಭೀಮಾ ನದಿಗೆ ನೀರು ಹರಿಸುವ ಕ್ರಮವನ್ನು ರಾಜ್ಯ ಸರ್ಕಾರ ಕೂಡಲೇ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವನಗೌಡ ಬಿರಾದಾರ ಸೋಮನಾಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಜಯ ಪಾಟೀಲ ಕನಮಡಿ, ಶಿವಪ್ಪಗೌಡ ಬಿರಾದಾರ, ದಾನಮ್ಮಗೌಡ್ತಿ ಪಾಟೀಲ, ಪೀರಗೊಂಡ ಗಧ್ಯಾಳ, ಮಹಾವೀರ ಕುಸನಾಳ, ರಾಮನಗೌಡ ಪಾಟೀಲ, ಎಸ್.ಎಂ. ಆನಂದಿ, ಶಂಕರಗೌಡ ಪಾಟೀಲ, ಬಿ.ಎಸ್. ಮಾಡಗಿ, ಶ್ರೀಶೈಲಗೌಡ ಪಾಟೀಲ, ಸಂಗನಗೌಡ ಪಾಟೀಲ (ಮುಳವಾಡ), ಎಂ.ಎಸ್. ಕಾಶಿನಕುಂಟೆ, ನಿಂಗನಗೌಡ ಪಾಟೀಲ, ಶಂಕರ ರೇವಡಿ, ಅಯನಗೌಡ ಪಾಟೀಲ, ಎಂ.ಒ. ಹಿರೇಕುರಬರ, ಎಂ.ಎಸ್. ಕೊಕರೆ, ಜಿ.ಕೆ. ನೆಲ್ಲಗಿ, ವೆಂಕನಗೌಡ ಪಾಟೀಲ, ರಮೇಶ್ ಪೂಜಾರಿ, ಜೆ.ಕೆ. ಪಾಲ್ಕೆ, ಸಂಗಮೇಶ ಅಂಗಡಿ ಸೇರಿದಂತೆ ಜಿಲ್ಲೆಯ ಪ್ರಗತಿಪರ ರೈತರು ಭಾಗವಹಿಸಿ ಸರ್ಕಾರ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande