
ಬೆಂಗಳೂರು, 26 ಜುಲೈ (ಹಿ.ಸ.):
ಆ್ಯಂಕರ್:
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಮಹಾಸಂಪರ್ಕ ಅಭಿಯಾನದ ಎರಡನೇ ದಿನವೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಜಾಗೃತಿ ಮೂಡಿಸುವ ಕಾರ್ಯ ಮುಂದುವರಿಯಿತು.
ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಪಕ್ಷದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಮತದಾರರನ್ನು ಭೇಟಿ ಮಾಡಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿದರು. ಅರ್ಹ ಮತದಾರರಿಗೆ ಗಣತಿ ನಮೂನೆ (ಎನ್ಯುಮರೇಷನ್ ಫಾರ್ಮ್) ಭರ್ತಿ ಮಾಡಲು ಸಹ ನೆರವು ನೀಡಿದರು.
ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ನಿಖರವಾಗಿ ದಾಖಲಾಗುವಂತೆ ಎಲ್ಲರೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಆರ್. ಅಶೋಕ ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.