ಮುಸಾವಳಗಿಯಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆ: ಕಾರ್ಯಕರ್ತರ ಒಗ್ಗಟ್ಟಿಗೆ ಸುನೀಲಗೌಡ ಬಿ. ಪಾಟೀಲ ಕರೆ
ವಿಜಯಪುರ, 26 ಜುಲೈ (ಹಿ.ಸ.) ಆ್ಯಂಕರ್ : ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದ ಮುಸಾವಳಗಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲ
ಕ್ಯೂಬನ್


ವಿಜಯಪುರ, 26 ಜುಲೈ (ಹಿ.ಸ.)

ಆ್ಯಂಕರ್ : ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದ ಮುಸಾವಳಗಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಚುನಾವಣಾ ಸಿದ್ಧತೆ, ಕಾರ್ಯಕರ್ತರ ಜವಾಬ್ದಾರಿ ಹಾಗೂ ಜನಸಂಪರ್ಕ ಅಭಿಯಾನದ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಸಭೆಯನ್ನು ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಬಿ. ಪಾಟೀಲ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷದ ಪರವಾಗಿ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಪಕ್ಷದ ತತ್ವ-ಸಿದ್ಧಾಂತಗಳು ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ. ಸಂಘಟನೆಯೇ ನಮ್ಮ ಶಕ್ತಿ, ಕಾರ್ಯಕರ್ತರೇ ನಮ್ಮ ಬಲ. ಜನಸೇವೆಯೇ ನಮ್ಮ ಪ್ರಮುಖ ಧ್ಯೇಯವಾಗಿದ್ದು, ಜನರ ವಿಶ್ವಾಸ ಗಳಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು, ಎಂದು ಅವರು ಹೇಳಿದರು.

ಚುನಾವಣೆಯಲ್ಲಿ ಗೆಲುವು ಸಾಧಿಸಲು ಗ್ರಾಮ ಮಟ್ಟದಿಂದಲೇ ಬಲಿಷ್ಠ ಸಂಘಟನೆಯನ್ನು ನಿರ್ಮಿಸುವ ಅಗತ್ಯವಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ವಿವಿಧ ಗ್ರಾಮಗಳ ಮುಖಂಡರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು, ಪಂಚಾಯತ್ ಮಟ್ಟದ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಚುನಾವಣಾ ಕಾರ್ಯತಂತ್ರ, ಮತದಾರರ ಸಂಪರ್ಕ, ಸಂಘಟನಾ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ ಮುಂದಿನ ದಿನಗಳಲ್ಲಿ ಕ್ಷೇತ್ರದಾದ್ಯಂತ ಪಕ್ಷದ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande