ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸಾರ್ವಜನಿಕರು
ಬೆಂಗಳೂರು, 26 ಜುಲೈ (ಹಿ.ಸ.): ಆ್ಯಂಕರ್: ಬೆಂಗಳೂರಿನ ರಾಜರಾಜೇಶ್ವರಿನಗರ ವ್ಯಾಪ್ತಿಯ ಬನಶಂಕರಿ 6ನೇ ಹಂತದ 2ನೇ ಬಡಾವಣೆಯಲ್ಲಿ ಚಿರತೆಯೊಂದು ಮತ್ತೆ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ನಿನ್ನೆ ಮುಂಜಾನೆ ಈ ಭಾಗದಲ್ಲಿ ಚಿರತೆ ಓಡಾಡುತ್ತಿರುವುದು ಕಂಡುಬಂದಿದ್ದು,
leopard-spotted-


ಬೆಂಗಳೂರು, 26 ಜುಲೈ (ಹಿ.ಸ.):

ಆ್ಯಂಕರ್:

ಬೆಂಗಳೂರಿನ ರಾಜರಾಜೇಶ್ವರಿನಗರ ವ್ಯಾಪ್ತಿಯ ಬನಶಂಕರಿ 6ನೇ ಹಂತದ 2ನೇ ಬಡಾವಣೆಯಲ್ಲಿ ಚಿರತೆಯೊಂದು ಮತ್ತೆ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ನಿನ್ನೆ ಮುಂಜಾನೆ ಈ ಭಾಗದಲ್ಲಿ ಚಿರತೆ ಓಡಾಡುತ್ತಿರುವುದು ಕಂಡುಬಂದಿದ್ದು, ಇದರ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಯಭೀತರಾದ ನಿವಾಸಿಗಳು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪಟಾಕಿ ಸಿಡಿಸಿ ಚಿರತೆಯನ್ನು ಓಡಿಸಲು ಯತ್ನಿಸಿದ್ದು, ಚಿರತೆ ಸುಳಿವು ಸಿಕಿಲ್ಲಾ. ಈ ಪ್ರದೇಶದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷವಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ.

ಸಂಜೆ 6 ಗಂಟೆಯ ನಂತರ ಮನೆಯಿಂದ ಹೊರಗೆ ಬರುವುದು ಕಷ್ಟವಾಗಿದೆ. ಮಕ್ಕಳನ್ನು ಆಟವಾಡಲು ಬಿಡಲು ಭಯವಾಗುತ್ತಿದೆ ಮತ್ತು ವಾಕಿಂಗ್ ಹೋಗಲೂ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಸ್ಥಳೀಯ ನಿವಾಸಿ ನಾರಾಯಣ ಮಾಧ್ಯಮಗಳ ಬಳಿ ಅಳಲು ತೋಡಿಕೊಂಡಿದ್ದು,

ಅರಣ್ಯ ಇಲಾಖೆಯು ಕೂಡಲೇ ಶಾಶ್ವತ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande