
ಬಳ್ಳಾರಿ, 27 ಜುಲೈ (ಹಿ.ಸ.)
ಆ್ಯಂಕರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ರವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಜು.28 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ. ರಾಜ್ ಕುಮಾರ್ ರಸ್ತೆಯ ಸರ್ಕಾರಿ(ಮಾ.ಪು) ಪದವಿ ಪೂರ್ವ ಸಂಯುಕ್ತ ಕಾಲೇಜು ಸಭಾಂಗಣದಲ್ಲಿ “ಅಂಬೇಡ್ಕರ್ ಓದು” ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳ್ಳಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ವಿ. ಹನುಮಂತ್ ರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ಸರ್ಕಾರಿ(ಮಾ.ಪು) ಪದವಿ ಪೂರ್ವ ಸಂಯುಕ್ತ ಕಾಲೇಜು ಪ್ರಾಂಶುಪಾಲರಾದ ಸುಂಕಪ್ಪ .ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಬಳ್ಳಾರಿಯ ಇಂಡೋ ಅಮೇರಿಕನ್ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಬಸವರಾಜ ಅಮಾತಿ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್