ವಿಜಯಪುರ: ವಿಕಲಚೇತನರಿಗೆ ಇಂಧನ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ
ವಿಜಯಪುರ, 27 ಜುಲೈ (ಹಿ.ಸ.) ಆ್ಯಂಕರ್ : ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಹತ್ವದ ಹೆಜ್ಜೆಯಾಗಿ ಇಂಧನ ಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್
ಬೈಕ್


ವಿಜಯಪುರ, 27 ಜುಲೈ (ಹಿ.ಸ.)

ಆ್ಯಂಕರ್ : ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಹತ್ವದ ಹೆಜ್ಜೆಯಾಗಿ ಇಂಧನ ಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಿತು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಮೂಲಕ ಅವರ ಸಂಚಾರ, ಉದ್ಯೋಗ ಹಾಗೂ ದೈನಂದಿನ ಬದುಕನ್ನು ಮತ್ತಷ್ಟು ಸುಲಭಗೊಳಿಸುವ ಪ್ರಯತ್ನಕ್ಕೆ ಸಚಿವ ಎಂ ಬಿ ಪಾಟೀಲ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಕಲಚೇತನರಿಗೆ ಕೇವಲ ಸೌಲಭ್ಯಗಳನ್ನು ನೀಡುವುದು ಮಾತ್ರವಲ್ಲದೆ, ಅವರಲ್ಲಿ ಆತ್ಮವಿಶ್ವಾಸ ಬೆಳೆಸಿ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಲು ಅವಕಾಶ ಕಲ್ಪಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು. ಇಂಧನ ಚಾಲಿತ ತ್ರಿಚಕ್ರ ವಾಹನಗಳು ಫಲಾನುಭವಿಗಳ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ನೆರವಾಗಲಿದ್ದು, ಅವರ ಜೀವನಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ಮಾಜಿ ಶಾಸಕರಾದ ಪ್ರೊ. ರಾಜು ಆಲಗೂರು, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ವಿಡಿಎ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಇಲಾಖೆಯ ಅಧಿಕಾರಿಗಳು, ಬಿಎಲ್ ಡಿ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಫಲಾನುಭವಿಗಳಿಗೆ ಶುಭ ಹಾರೈಸಿದರು.

ಫಲಾನುಭವಿಗಳು ಸರ್ಕಾರದ ಈ ಯೋಜನೆಗೆ ಕೃತಜ್ಞತೆ ಸಲ್ಲಿಸಿ, ಈ ವಾಹನಗಳ ನೆರವಿನಿಂದ ತಮ್ಮ ದೈನಂದಿನ ಚಟುವಟಿಕೆಗಳನ್ನು ಸುಲಭವಾಗಿ ನಿರ್ವಹಿಸಲು ಹಾಗೂ ಉದ್ಯೋಗ ಮತ್ತು ಸ್ವಾವಲಂಬಿ ಬದುಕಿನತ್ತ ಮತ್ತಷ್ಟು ಆತ್ಮವಿಶ್ವಾಸದಿಂದ ಹೆಜ್ಜೆ ಇಡಲು ಸಾಧ್ಯವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande