ತೇರದಾಳ ಬಿಜೆಪಿ ಗ್ರಾಮೀಣ ಮಂಡಳದ ಸಾಮಾಜಿಕ ಜಾಲತಾಣ ತಂಡಕ್ಕೆ ನೂತನ ಪದಾಧಿಕಾರಿಗಳ ನೇಮಕ
ಬಾಗಲಕೋಟೆ, 27 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತೇರದಾಳ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಮಂಡಳದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರು, ಸಹ ಸಂಚಾಲಕರು ಹಾಗೂ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿ
ಅಭಿನಂದನೆ


ಬಾಗಲಕೋಟೆ, 27 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತೇರದಾಳ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಮಂಡಳದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರು, ಸಹ ಸಂಚಾಲಕರು ಹಾಗೂ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳು ಇಂದಿನ ರಾಜಕೀಯ, ಸಂಘಟನೆ ಹಾಗೂ ಜನಸಂಪರ್ಕದ ಪ್ರಮುಖ ಮಾಧ್ಯಮಗಳಾಗಿದ್ದು, ಪಕ್ಷದ ತತ್ವ, ಸಿದ್ಧಾಂತ, ಸರ್ಕಾರದ ಜನಪರ ಯೋಜನೆಗಳು ಮತ್ತು ಸಂಘಟನೆಯ ಚಟುವಟಿಕೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಈ ತಂಡದ ಪಾತ್ರ ಮಹತ್ವದ್ದಾಗಿದೆ. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಪಕ್ಷದ ಹಿರಿಯ ಮುಖಂಡರು ನೂತನ ತಂಡದ ಸದಸ್ಯರಿಗೆ ಶುಭ ಹಾರೈಸಿ, ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ಚಟುವಟಿಕೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

ಯುವ ಕಾರ್ಯಕರ್ತರನ್ನು ಸಂಘಟಿಸುವುದು, ಪಕ್ಷದ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುವುದು ಹಾಗೂ ಜನರೊಂದಿಗೆ ನಿರಂತರ ಸಂಪರ್ಕ ಸಾಧಿಸುವಲ್ಲಿ ಈ ತಂಡ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಯ್ಕೆಯಾದ ಎಲ್ಲ ಸಂಚಾಲಕರು, ಸಹ ಸಂಚಾಲಕರು ಹಾಗೂ ಸದಸ್ಯರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಅವಧಿಯಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ ಹಾಗೂ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande