ಹೆಚ್ಚುವರಿ ಡಿಸಿಎಂ ಸೃಷ್ಟಿ ಚರ್ಚೆ ಕೇವಲ ಊಹಾಪೋಹ: ಬಿ.ಕೆ. ಹರಿಪ್ರಸಾದ್
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿರುವ ಸಚಿವ ಸಂಪುಟ ವಿಸ್ತರಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿಗಳ ಸೃಷ್ಟಿಯ ವಾದಗಳು ಸಂಪೂರ್ಣವಾಗಿ ಆಧಾರರಹಿತ ಹಾಗೂ ಕೇವಲ ಊಹಾಪೋಹಗಳಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ
ಸಂದರ್ಭಿಕ ಚಿತ್ರ


ಬೆಂಗಳೂರು, 27 ಜುಲೈ (ಹಿ.ಸ.):

ಆ್ಯಂಕರ್:

ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿರುವ ಸಚಿವ ಸಂಪುಟ ವಿಸ್ತರಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿಗಳ ಸೃಷ್ಟಿಯ ವಾದಗಳು ಸಂಪೂರ್ಣವಾಗಿ ಆಧಾರರಹಿತ ಹಾಗೂ ಕೇವಲ ಊಹಾಪೋಹಗಳಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸದಾಗಿ ಹೆಚ್ಚುವರಿ ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗುತ್ತದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅದೆಲ್ಲವೂ ಕೇವಲ ಊಹಾಪೋಹಗಳು. 'ಬಲ್ಲ ಮೂಲಗಳಿಂದ' ಎಂದು ವರದಿಗಳಲ್ಲಿ ಬಿತ್ತರಿಸಲಾಗುತ್ತಿದ್ದು, ಆ ಬಲ್ಲ ಮೂಲಗಳು ಯಾರು ಎಂಬುದನ್ನು ನೀವೇ ಅವರನ್ನೇ ಕೇಳಿದರೆ ಬಹಳ ಒಳ್ಳೆಯದು ಎಂದು ತಿರುಗೇಟು ನೀಡಿದರು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಕುರಿತು ಅಂತಿಮ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದ ಅವರು, ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಇತರ ನಾಯಕರ ದೆಹಲಿ ಪ್ರವಾಸದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ತಾವು ಜುಲೈ 30ರವರೆಗೆ ರಾಜ್ಯದಲ್ಲಿರುವುದಿಲ್ಲ ಎಂದ ಅವರು, ಈ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಯಾವುದೇ ಸಂಬಂಧವಿಲ್ಲ, ಇದು ಸಂಪೂರ್ಣವಾಗಿ ಖಾಸಗಿ ವಿಚಾರ ಎಂದು ಅವರು ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande