ಸಚಿವ ಸ್ಥಾನ ಕೇಳಿದ್ದೆನೆ, ಹೈಕಮಾಂಡ್ ತೀರ್ಮಾನವೇ ಅಂತಿಮ: ಶಾಸಕ ಬೇಲೂರು ಗೋಪಾಲಕೃಷ್ಣ
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದ್ದು, ಈ ಬಾರಿ ಸಂಪುಟ ಪ್ರವೇಶಿಸಲು ತಾನು ಕೂಡ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ಗೆ ಬೇಡಿಕೆ ಇಟ್ಟಿರುವುದಾಗಿ ಶಾಸಕ ಬೇಲೂರು ಗೋಪಾಲಕೃಷ್ಣ ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.
ಸಂದರ್ಭಿಕ ಚಿತ್ರ


ಬೆಂಗಳೂರು, 27 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದ್ದು, ಈ ಬಾರಿ ಸಂಪುಟ ಪ್ರವೇಶಿಸಲು ತಾನು ಕೂಡ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ಗೆ ಬೇಡಿಕೆ ಇಟ್ಟಿರುವುದಾಗಿ ಶಾಸಕ ಬೇಲೂರು ಗೋಪಾಲಕೃಷ್ಣ ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದತೆ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ.

ವರಿಷ್ಠರ ಮಟ್ಟದಲ್ಲಿ ಸರಣಿ ಸಭೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ನಿರ್ಧಾರ ಹೊರಬೀಳಲಿದೆ ಎಂಬ ದೃಢ ವಿಶ್ವಾಸವನ್ನು ವ್ಯಕ್ತಪಡಿಸಿದರು.

ತಮ್ಮ ರಾಜಕೀಯ ಹಿನ್ನೆಲೆಯನ್ನು ಪ್ರಸ್ತಾಪಿಸಿದ ಅವರು, ನಾನು ಈಗಾಗಲೇ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹಿಂದುಳಿದ ವರ್ಗದ ನಾಯಕನಾಗಿ ಸಮುದಾಯದ ಹಾಗೂ ಕ್ಷೇತ್ರದ ಧ್ವನಿಯಾಗಿ ಸಚಿವ ಸ್ಥಾನಕ್ಕೆ ಆಕಾಂಕ್ಷೆಯಾಗಿ ಈಗಾಗಲೇ ಹಿರಿಯ ನಾಯಕರಿಗೆ ನನ್ನ ಬೇಡಿಕೆಯನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದರು.

ಆದಾಗ್ಯೂ, ವೈಯಕ್ತಿಕ ಆಕಾಂಕ್ಷೆಗಳಿಗಿಂತ ಪಕ್ಷದ ಹಿತವೇ ಮುಖ್ಯ ಎಂದ ಶಾಸಕರು, ಅಂತಿಮವಾಗಿ ಪಕ್ಷದ ವರಿಷ್ಠರು ಹಾಗೂ ರಾಜ್ಯದ ನಾಯಕರು ಕೈಗೊಳ್ಳುವ ಯಾವುದೇ

ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ತಿಳಿಸಿದರು. ಮುಂಬರುವ 2028ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮತ್ತು ಆಡಳಿತವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹೈಕಮಾಂಡ್ ಅತ್ಯಂತ ಸೂಕ್ತ ಹಾಗೂ ತಕ್ಕ ತೀರ್ಮಾನ ಕೈಗೊಳ್ಳಲಿದೆ ಎಂದು ಬೇಲೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande