ಮೇಕೆದಾಟು-ಮಹದಾಯಿ ಸೇರಿ ಜಲ ಯೋಜನೆಗಳ ಪ್ರಗತಿ ಪರಿಶೀಲನೆ: ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಸಭೆ
ನವದೆಹಲಿ, 27 ಜುಲೈ (ಹಿ.ಸ.): ಆ್ಯಂಕರ್: ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಪ್ರಮುಖ ಕುಡಿಯುವ ನೀರು ಹಾಗೂ ಜಲ ಸಂಪನ್ಮೂಲ ಯೋಜನೆಗಳ ಸ್ಥಿತಿಗತಿ, ಜಲಾಶಯಗಳಲ್ಲಿನ ನೀರಿನ ಸಂಗ್ರಹ ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ದೆಹಲಿಯ ಕರ್ನಾಟಕ ಭವನದಲ್ಲಿ
CM meeting in delhi


ನವದೆಹಲಿ, 27 ಜುಲೈ (ಹಿ.ಸ.):

ಆ್ಯಂಕರ್:

ಮೇಕೆದಾಟು, ಮಹದಾಯಿ ಸೇರಿದಂತೆ ರಾಜ್ಯದ ಪ್ರಮುಖ ಕುಡಿಯುವ ನೀರು ಹಾಗೂ ಜಲ ಸಂಪನ್ಮೂಲ ಯೋಜನೆಗಳ ಸ್ಥಿತಿಗತಿ, ಜಲಾಶಯಗಳಲ್ಲಿನ ನೀರಿನ ಸಂಗ್ರಹ ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಯೋಜನೆಗಳ ಪ್ರಗತಿ, ಕಾನೂನು ಸಂಬಂಧಿತ ಬೆಳವಣಿಗೆಗಳು ಹಾಗೂ ರಾಜ್ಯದ ನೀರಿನ ನಿರ್ವಹಣೆಯ ಬಗ್ಗೆ ಸಮಗ್ರ ಚರ್ಚೆ ನಡೆಯಿತು. ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ದೆಹಲಿಯ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿ ಕಾರ್ಯದರ್ಶಿ ನಕುಲ್, ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande