ಈ ವಾರವೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಈ ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರ
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಮುಖ್ಯಮಂತ್ರಿ


ಬೆಂಗಳೂರು, 27 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಈ ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮಗಳೇ ಹೆಚ್ಚು ಆತುರದಲ್ಲಿವೆ ಎಂದು ಹಾಸ್ಯಚಟಾಕಿ ಹಾರಿಸಿದರು.

ದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ನಡೆಯಲಿರುವ ಸಭೆಯಲ್ಲಿ ಬರ ಪರಿಸ್ಥಿತಿ, ನೀರಿನ ಸಮಸ್ಯೆ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಕುರಿತು ಸಮಗ್ರವಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ರಾಜ್ಯದ ಹಿತಾಸಕ್ತಿ ವಿಚಾರಗಳಲ್ಲಿ ಎಲ್ಲ ಸಂಸದರನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಬಳಿಕ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆದು ರಾಜ್ಯದ ಹಿರಿಯ ನಾಯಕರೊಂದಿಗೆ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande