
ಬೆಂಗಳೂರು, 27 ಜುಲೈ (ಹಿ.ಸ.)
ಆ್ಯಂಕರ್:
ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ಹಾಗೂ ಹೈಕಮಾಂಡ್ ಮಟ್ಟದ ಚರ್ಚೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9:30ರ ಇಂಡಿಗೋ ವಿಮಾನದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದರು.
ಇವರೊಂದಿಗೆ ಶಾಸಕ ಕಂಪ್ಲಿ ಗಣೇಶ್ ಕೂಡ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ವಿಮಾನ ನಿಲ್ದಾಣದವರೆಗೆ ಜೊತೆಯಾಗಿ ಬಂದಿದ್ದ ಸಚಿವ ಸಂತೋಷ್ ಲಾಡ್ ಅವರು ಸಿಎಂ ಅವರನ್ನು ಬೀಳ್ಕೊಟ್ಟು ವಾಪಸ್ಸಾದರು. ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಸಂಭಾವ್ಯ ಸಚಿವರ ಅಂತಿಮ ಪಟ್ಟಿಯನ್ನು ಹೈಕಮಾಂಡ್ ನಾಯಕರ ಮುಂದಿಟ್ಟು ಗ್ರೀನ್ ಸಿಗ್ನಲ್ ಪಡೆದುಕೊಳ್ಳುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ. ಅಲ್ಲದೇ ರಾಜ್ಯದಲ್ಲಿ ಎದುರಾಗಿರುವ ಬರಗಾಲದ ಸ್ಥಿತಿಗತಿ ಹಾಗೂ ಕೇಂದ್ರದಿಂದ ಬರಬೇಕಿರುವ ಪರಿಹಾರ ಅನುದಾನದ ಕುರಿತು ರಾಜ್ಯದ ಸಂಸದರೊಂದಿಗೆ ಸಿಎಂ ಸಭೆ ನಡೆಸಿ ಚರ್ಚಿಸಲಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆಗೆ ಬೇಡಿಕೆ ಇಡಲು ಸಿದ್ಧತೆ ನಡೆಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII